ಮಂಗಳೂರು: ಧರ್ಮಸ್ಥಳಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ

ಮಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಅವರು ಕಳೆದ ದಿನ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ದೇಗುಲದಲ್ಲಿ ಶ್ರೀಮಂಜುನಾಥಸ್ವಾಮಿ ದರ್ಶನ ಪಡೆದ ಬಳಿಕ ವೀರೇಂದ್ರ ಹೆಗ್ಗಡೆ ಜೊತೆ ಮಾತುಕತೆ…

ಮಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಅವರು ಕಳೆದ ದಿನ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ದೇಗುಲದಲ್ಲಿ ಶ್ರೀಮಂಜುನಾಥಸ್ವಾಮಿ ದರ್ಶನ ಪಡೆದ ಬಳಿಕ ವೀರೇಂದ್ರ ಹೆಗ್ಗಡೆ ಜೊತೆ ಮಾತುಕತೆ ನಡೆಸಿದರು. ಬಳಿಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದರು.

ದೇವರ ದರ್ಶನ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಬಹಳ ವರ್ಷಗಳ ನಂತರ ಮಂಜುನಾಥಸ್ವಾಮಿ ದರ್ಶನ ಪಡೆದಿದ್ದೇನೆ. ಹೆಗ್ಗಡೆ ಅವರ ಆಶೀರ್ವಾದ ಕೂಡ ದೊರೆತಿದೆ. ನಮ್ಮ ಭಾಗದಲ್ಲಿ ಒಂದು ರೀತಿಯ ಬರಗಾಲ ಇದೆ. ಸಕಾಲದಲ್ಲಿ ಮಳೆ ಬೆಳೆ ಆಗಲಿ ಅಂತಾ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಬರುವ ದಿನಗಳು ಒಳ್ಳೆ ದಿನಗಳಾಗಿರುತ್ತೆ ಅಂತಾ ನಾನು ಭಾವಿಸುತ್ತೇನೆ ಎಂದು ಹೇಳಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.