ವಿದ್ಯಾರ್ಥಿಗಳೇ ಗಮನಿಸಿ: ‘ಯುವನಿಧಿ ಯೋಜನೆ’ಗೆ ಆನ್‍ಲೈನ್ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಗೆ ( Yuvanidhi Scheme ) ನೋಂದಣೆ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‍ಲೈನ್ ನೋಂದಣಿ ಆಹ್ವಾನಿಸಿದೆ. 2022-23ನೇ ಹಾಗೂ ನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ…

ಬೆಂಗಳೂರು: ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಗೆ ( Yuvanidhi Scheme ) ನೋಂದಣೆ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‍ಲೈನ್ ನೋಂದಣಿ ಆಹ್ವಾನಿಸಿದೆ.

2022-23ನೇ ಹಾಗೂ ನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ರೂ. 3000/- (ಪದವೀಧರ ನಿರುದ್ಯೋಗಿಗಳು) ಹಾಗೂ ರೂ. 1500/- (ಡಿಪ್ಲೋಮಾ ಪಡೆದ ನಿರುದ್ಯೋಗಿಗಳು) ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.

ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳು ಗ್ರಾಮ ಒನ್, ಶಿವಮೊಗ್ಗ ಒನ್ ಅಥವಾ ಸೇವಾ ಸಿಂಧು ಪೋರ್ಟಲ್ ಮೂಲಕ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಸ್ವಯಂ ಘೋಷಣೆ ನೀಡದಿದ್ದಲ್ಲಿ ಆ ತಿಂಗಳು ನೇರ ನಗದು ಖಾತಗೆ ಜಮಾ ಆಗುವುದಿಲ್ಲ. ಆದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಸ್ವಯಂ ಘೋಷಣೆ ಮಾಡುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.