Railways jobs : ರೈಲ್ವೆಯಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆ ಒಳ್ಳೆಯ ಸುದ್ದಿ ನೀಡಿದೆ. ಆಗ್ನೆಯ ಮಧ್ಯ ರೈಲ್ವೆ 10 ನೇ ತರಗತಿ & ಐಟಿಐ ಅರ್ಹತೆ ಹೊಂದಿರುವ 1007 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 2025-26ನೇ ಸಾಲಿಗೆ ನಾಗುರ ವಿಭಾಗದ ಮೋತಿಬಾಗ್ ಕಾರ್ಯಾಗಾರದಲ್ಲಿ ಅಪ್ರೆಂಟಿಸ್‌ಶಿಪ್ ನೀಡಲಾಗುವುದು. ಈ ಅಧಿಸೂಚನೆಯ ಅರ್ಹತೆ, ಆಯ್ಕೆ ಪ್ರಕ್ರಿಯೆ ಈ ಲೇಖನದಲ್ಲಿ ತಿಳಿದುಕೊಳ್ಳೋಣ.
ಮೇ 4, 2025 ರವರಿಗೆ ಅವಕಾಶ
ಈ ಅಧಿಸೂಚನೆಯ ಮೂಲಕ, ಫಿಟ್ಟರ್, ಕಾರ್ಪೆಂಟರ್, ವೆಲ್ಡರ್, ಎಲೆಕ್ನಿಷಿಯನ್, ಸ್ಟೆನೋಗ್ರಾಫರ್, ಪ್ಲಂಬರ್, ಪೇಂಟರ್, ವೈರ್ ಮ್ಯಾನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಡೀಸೆಲ್ ಮೆಕ್ಯಾನಿಕ್, ಮೆಷಿನಿಸ್ಟ್ ಟರ್ನರ್ ಮತ್ತು ಪಿಒಪಿಎ ಟ್ರೇಡ್‌ಗಳಲ್ಲಿ ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ಪ್ರಕ್ರಿಯೆಯು ಏಪ್ರಿಲ್ 5 ರಂದು ಪ್ರಾರಂಭವಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮೇ 4 ರವರೆಗೆ ಅವಕಾಶವಿದೆ
ಅರ್ಹತೆ
- ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಕನಿಷ್ಠ 50 ಪ್ರತಿಶತ ಅಂಕಗಳೊಂದಿಗೆ 10 ನೇ ತರಗತಿ ಉತ್ತೀರ್ಣರಾಗಿರಬೇಕು & ಸಂಬ೦ಧಿತ ಟ್ರೇಡ್‌ಗಳಲ್ಲಿ ಐಟಿಐ ಪೂರ್ಣಗೊಳಿಸಿರಬೇಕು.
- ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 5, 2025 ಕ್ಕೆ 15 ರಿಂದ 24 ವರ್ಷಗಳ ನಡುವೆ ಇರಬೇಕು.
- ಒಬಿಸಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿಗಳಿಗೆ 5 ವರ್ಷ ಮತ್ತು ಅಂಗವಿಕಲರು ಮತ್ತು ಮಾಜಿ ಸೈನಿಕರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಆಯ್ಕೆ ಪ್ರಕ್ರಿಯೆ
10ನೇ ತರಗತಿ ಮತ್ತು ಐಟಿಐ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನಂತರ, ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಅವರನ್ನು ಆಕ್ಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 7,700 ರೂ. ಯಿ೦ದ 8,050 ರೂ. ಸ್ಟೈಫಂಡ್ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 2025-26ನೇ ಸಾಲಿಗೆ ನಾಗುರ ವಿಭಾಗದ ಮೋತಿಬಾಗ್ ಕಾರ್ಯಾಗಾರದಲ್ಲಿ ಅಪ್ರೆಂಟಿಸ್ ಶಿಪ್ ತರಬೇತಿ ನೀಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ
ಆಗ್ನೆಯ ಮಧ್ಯ ರೈಲ್ವೆಯ ಅಧಿಕೃತ ವೆಬ್‌ಸೈಟ್ https://secr.indianrailways.gov.in/ ឥឡូ ಅರ್ಜಿಯಲ್ಲಿ ನಿಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ಅರ್ಹತೆಯ ವಿವರಗಳನ್ನು ನಮೂದಿಸಬೇಕು. ಮುಂದೆ, ನಿಮ್ಮ ಶೈಕ್ಷಣಿಕ ಅರ್ಹತೆಗಳಿಗೆ ಸ೦ಬ೦ಧಿಸಿದ ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸದೆ ಮೇ 4 ರವರೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.