ನಾಳೆ 1000 ವಿಎ ಹುದ್ದೆಗಳ ನೇಮಕಾತಿಗೆ ಅಂತಿಮ ಪರೀಕ್ಷೆ: 4.8 ಲಕ್ಷ ಮಂದಿ ನೋಂದಣಿ

ಬೆಂಗಳೂರು: ರಾಜ್ಯಾದ್ಯಂತ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅ.27ರಂದು ನಡೆಸುವ ಮುಖ್ಯ ಪರೀಕ್ಷೆಗೆ ಅಗತ್ಯ ಸಿದ್ಧತೆ ಹಾಗೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಪರೀಕ್ಷೆಗೆ ಒಟ್ಟು…

ಬೆಂಗಳೂರು: ರಾಜ್ಯಾದ್ಯಂತ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅ.27ರಂದು ನಡೆಸುವ ಮುಖ್ಯ ಪರೀಕ್ಷೆಗೆ ಅಗತ್ಯ ಸಿದ್ಧತೆ ಹಾಗೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಪರೀಕ್ಷೆಗೆ ಒಟ್ಟು 4.8 ಲಕ್ಷ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. 1,173 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ವಸ್ತ್ರ ಸಂಹಿತೆ ಕೂಡ ಇದ್ದು, ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು, ಸರ್ಕಾರ ವಯೋಮಿತಿ ಸಡಿಲಿಸಿದ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಸುಮಾರು 63 ಸಾವಿರ ಮಂದಿಗೆ ಅ.26ಕ್ಕೆ ರಾಜ್ಯದ 153 ಕೇಂದ್ರಗಳಲ್ಲಿ ಕನ್ನಡ ಕಡ್ಡಾಯ ಪರೀಕ್ಷೆ ನಡೆಯಲಿದೆ. ಇದರಲ್ಲಿ ಜಿಟಿಟಿಸಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ 2,300 ಮಂದಿಯೂ ಸೇರಿದ್ದಾರೆ ಎಂದು ಅವರು ಹೇಳಿದ್ದಾರೆ.

Vijayaprabha Mobile App free

ಓಎಂಆರ್ ತುಂಬುವಾಗ ಎಚ್ಚರ:

ಸೆ.26ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆಯ ಓಎಂಆರ್ ಶೀಟ್ ನಲ್ಲಿ ನೋಂದಣಿ ಸಂಖ್ಯೆ‌ ಮತ್ತು ವರ್ಶನ್ ಕೋಡ್ ನಮೂದಿಸುವಾಗ ಸುಮಾರು ಒಂಬತ್ತು ಸಾವಿರ ಮಂದಿ ತಪ್ಪು ಮಾಡಿದ್ದು, ಪುನಃ ಆ ರೀತಿ ಆಗಬಾರದು ಎನ್ನುವ ಕಾರಣಕ್ಕೆ ಅಭ್ಯಾಸ ಸಲುವಾಗಿ ಈ ಬಾರಿ ಮಾದರಿ ಓಎಂಆರ್ ಶೀಟ್ ನೀಡಲಾಗಿತ್ತು. ಸರಿಯಾಗಿ ಅಭ್ಯಾಸ ಮಾಡಿಕೊಂಡು ಬನ್ನಿ. ಪುನಃ ತಪ್ಪುಗಳಾದರೆ ಅದಕ್ಕೆ ಪ್ರಾಧಿಕಾರ ಜವಾಬ್ದಾರಿಯಲ್ಲ ಎಂದು ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.