NWKRTC Recruitment | 10TH ಪಾಸಾಗಿದ್ರೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ನೇಮಕಾತಿ

NWKRTC Recruitment | ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು (NWKRTC) ವಿವಿಧ ಹುದ್ದೆಗಳಿಗೆ ಹೊಸ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಸರ್ಕಾರಿ ಉದ್ಯೋಗವನ್ನು ಕನಸಾಗಿಟ್ಟಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದ್ದು, 10ನೇ ತರಗತಿ ಪಾಸಾದವರಿಂದ…

NWKRTC Recruitment

NWKRTC Recruitment | ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು (NWKRTC) ವಿವಿಧ ಹುದ್ದೆಗಳಿಗೆ ಹೊಸ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಸರ್ಕಾರಿ ಉದ್ಯೋಗವನ್ನು ಕನಸಾಗಿಟ್ಟಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದ್ದು, 10ನೇ ತರಗತಿ ಪಾಸಾದವರಿಂದ ಹಿಡಿದು ಪದವೀಧರರ ತನಕ ಎಲ್ಲರೂ ಅರ್ಜಿ ಸಲ್ಲಿಸಬಹುದು. ನಿಗಮದ ಅಧಿಸೂಚನೆಯ ಪ್ರಕಾರ, ನೇಮಕಾತಿಗೆ ಸಂಬ೦ಧಿಸಿದ ಎಲ್ಲಾ ಪ್ರಕ್ರಿಯೆಗಳು ಆನ್‌ಲೈನ್ ಮೂಲಕ ನಡೆಯಲಿದ್ದು, ನವೆಂಬರ್ 10ರೊಳಗೆ ಅರ್ಜಿ ಸಲ್ಲಿಸಬೇಕಾಗಿದೆ.

ಶೈಕ್ಷಣಿಕ ಅರ್ಹತೆ & ಹುದ್ದೆಗಳ ವಿವರ

NWKRTC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, 12ನೇ ತರಗತಿ, ಪದವಿ, ಬಿ.ಕಾಂ, ಬಿಇ ಅಥವಾ ಬಿ.ಟೆಕ್ ಪೂರ್ಣಗೊಳಿಸಿರಬೇಕು. ಹುದ್ದೆಗಳ ವರ್ಗಾವಳಿ ಮತ್ತು ಕೆಲಸದ ಪ್ರಕಾರ ಶೈಕ್ಷಣಿಕ ಅರ್ಹತೆ ಬದಲಾಗಬಹುದು. ಹೀಗಾಗಿ, ಪ್ರತಿ ಹುದ್ದೆಗೆ ಅಗತ್ಯವಾದ ಶಿಕ್ಷಣದ ವಿವರಗಳನ್ನು ಅಧಿಕೃತ ಜಾಲತಾಣದಲ್ಲಿ ಪರಿಶೀಲಿಸಬಹುದು.

ವಯೋಮಿತಿ & ಸಡಿಲಿಕೆ

ಈ ನೇಮಕಾತಿಯಲ್ಲಿ ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು. ಆದರೆ 2A, 2B, 3A, 3B ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಹೀಗಾಗಿ, ವಿವಿಧ ವರ್ಗದ ಅಭ್ಯರ್ಥಿಗಳು ತಮ್ಮ ವಯಸ್ಸಿನ ಅನುಸಾರ ಅರ್ಜಿ ಸಲ್ಲಿಸಬಹುದು.

Vijayaprabha Mobile App free

ಅರ್ಜಿ ಶುಲ್ಕ & ಪಾವತಿ ವಿಧಾನ

ಸಾಮಾನ್ಯ ವರ್ಗದ ಅಭ್ಯರ್ಥಿಗಳು (2A, 2B, 3A, 3B) ₹750 ಶುಲ್ಕ ಪಾವತಿಸಬೇಕು. SC/ST ಮತ್ತು ಮಾಜಿ ಸೇನಾ ಅಭ್ಯರ್ಥಿಗಳಿಗೆ ₹500 ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ *250 ಶುಲ್ಕ ನಿಗದಿಯಾಗಿದೆ. ಎಲ್ಲಾ ಪಾವತಿಗಳು ಆನ್‌ಲೈನ್ ಮೂಲಕ ಮಾತ್ರ ಸ್ವೀಕರಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

NWKRTC ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ನೀಡಲಾದ ಆನ್‌ಲೈನ್‌ ಲಿಂಕ್‌ನಲ್ಲಿ ನಿಮ್ಮ ವಿವರಗಳನ್ನು ನಮೂದಿಸಿ. ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳು ಹಾಗೂ ಇತ್ತೀಚಿನ ಪಾಸ್‌ಪೋರ್ಟ್ ಫೋಟೋವನ್ನು ಅಪ್‌ಲೋಡ್ ಮಾಡಿ. ನಂತರ ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕ ಪಾವತಿಸಿ, ಕೊನೆಯಲ್ಲಿ “SUBMIT’ ಬಟನ್ ಒತ್ತಿ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಿದ ನಂತರ, ಭವಿಷ್ಯದಲ್ಲಿನ ಉಲ್ಲೇಖಕ್ಕಾಗಿ ವಿನಂತಿ ಸಂಖ್ಯೆಯನ್ನು ಸಂಗ್ರಹಿಸಿಕೊಳ್ಳುವುದು ಅತ್ಯಂತ ಮುಖ್ಯ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.