Railway Recruitment : ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಭಾರತೀಯ ರೈಲ್ವೆ 9,970 ಸಹಾಯಕ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯ ಬಗ್ಗೆ ಈ ಲೇಖನದಲ್ಲಿ ವಿವರವಾಗಿ ತಿಳಿದುಕೊಳ್ಳೋಣ.
ಕೊನೆಯ ದಿನಾಂಕ
ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ 9,970 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಹೆಚ್ಚಿನವು ಪೂರ್ವ ಕರಾವಳಿ ರೈಲ್ವೆ, ಪೂರ್ವ ರೈಲ್ವೆ & ಆಗ್ನೆಯ ರೈಲ್ವೆಯಲ್ಲಿವೆ. ದಕ್ಷಿಣ ಮಧ್ಯ ರೈಲ್ವೆ ವಲಯಕ್ಕೆ 989 ಹುದ್ದೆಗಳನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಏಪ್ರಿಲ್ 10, 2025 ರಿಂದ ಪ್ರಾರ೦ಭವಾಗುತ್ತದೆ. ಅರ್ಜಿ ಸಲ್ಲಿಸಲು ನಿಮಗೆ ಮೇ 9, 2025 ರವರೆಗೆ ಸಮಯವಿದೆ.
ಅರ್ಹತೆ(Eligibility)
10 ನೇ ತರಗತಿಯಲ್ಲಿ ಉತ್ತೀರ್ಣರಾಗುವುದರ ಜೊತೆಗೆ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ITI, ಡಿಪ್ಲೊಮಾ ಅಥವಾ ಪದವಿ ಪಡೆದಿರಬೇಕು. ಯಾವುದೇ ಅನುಭವದ ಅಗತ್ಯವಿಲ್ಲ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 33 ವರ್ಷ ವಯಸ್ಸಿನವರಾಗಿರಬೇಕು. OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ, ದಿವ್ಯಾಂಗ ಅಭ್ಯರ್ಥಿಗಳು & ಮಾಜಿ ಸೈನಿಕರ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಆಯ್ಕೆ ಪ್ರಕ್ರಿಯೆ (Selection Process)
ಕಂಪ್ಯೂಟರ್ ಆಧಾರಿತ ಪರೀಕ್ಷೆಗಳ ಮೂಲಕ ಉದ್ಯೋಗಕ್ಕೆ ಆಯ್ಕೆಯನ್ನು ಮಾಡಲಾಗುತ್ತದೆ. ಕೆಲಸಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ವೇತನ, ಎಲ್ಲಾ ಭತ್ಯೆಗಳನ್ನು ಒಳಗೊಂಡಂತೆ, 50,000 ರೂ.ಗಳಿಗಿಂತ ಹೆಚ್ಚಿರಬಹುದು. ಈ ಕೆಲಸಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉಜ್ವಲ ಭವಿಷ್ಯವಿರುತ್ತದೆ.
ಅರ್ಜಿ ಶುಲ್ಕ (Application fee)
ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 500 ರೂ. ಶುಲ್ಕವನ್ನು ಪಾವತಿಸಬೇಕು. SC/ST, ಮಹಿಳಾ ಅಭ್ಯರ್ಥಿಗಳು & OBC ಅಭ್ಯರ್ಥಿಗಳಿಗೆ 250 ರೂ. ಪಾವತಿಯನ್ನು ಆನ್‌ಲೈನ್‌ನಲ್ಲಿ ಮಾತ್ರ ಮಾಡಬೇಕಾಗಿದೆ. ಹೆಚ್ಚಿನ ಮಾಹಿತಿಗೆ rrbapply.gov.in ಅಧಿಕೃತ ವೆಬ್ ಸೈಟ್ ಪರಿಶೀಲಿಸಬಹುದು.