karnataka budget 2024: ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ ಗೊತ್ತಾ? ಇಲ್ಲಿದೆ ಇಲಾಖಾವಾರು ಸಂಪೂರ್ಣ ವಿವರ

Vijayaprabha

karnataka budget 2024: ಸಿಎಂ ಸಿದ್ದರಾಮಯ್ಯನವರು 2024ರ ಬಜೆಟ್ ಮಂಡಿಸಿದ್ದು, ವಿವಿಧ ಇಲಾಖೆಗಳಿಗೆ ನೀಡಿದ ಅನುದಾನ ಸಂಪೂರ್ಣ ಮಾಹಿತಿ ಇಲ್ಲಿದೆ.

  • ಶಿಕ್ಷಣ ಇಲಾಖೆ: 44,422 ಕೋಟಿ ರೂಪಾಯ
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ: 34,406 ಕೋಟಿ ರೂ.
  • ಇಂಧನ ಇಲಾಖೆ: 23,159 ಕೋಟಿ ರೂಪಾಯಿ
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ: 21,160 ಕೋಟಿ ರೂಪಾಯಿ
  • ಗೃಹ ಮತ್ತು ಸಾರಿಗೆ ಇಲಾಖೆ: 19,777 ಕೋಟಿ ರೂಪಾಯಿ
  • ನೀರಾವರಿ ಇಲಾಖೆ: 19,179 ಕೋಟಿ ರೂಪಾಯಿ
  • ನಗರಾಭಿವೃದ್ಧಿ ಇಲಾಖೆ: 18,155 ಕೋಟಿ ರೂಪಾಯಿ
  • ಕಂದಾಯ: ₹16,170 ಕೋಟಿ,
  • ಆರೋಗ್ಯ: ₹15,145 ಕೋಟಿ
  • ಸಮಾಜ ಕಲ್ಯಾಣ: ₹13,334 ಕೋಟಿ,
  • ಲೋಕೋಪಯೋಗಿ: ₹10,424 ಕೋಟಿ,
  • ಆಹಾರ ಇಲಾಖೆ: ₹9,963 ಕೋಟಿ,
  • ಕೃಷಿ ಇಲಾಖೆ: ₹6,688 ಕೋಟಿ
  • ಪಶು ಸಂಗೋಪನೆ & ಮೀನುಗಾರಿಕೆ: ₹3,307 ಕೋಟಿ,
  • ಇತರೆ ಅಭಿವೃದ್ಧಿ ಕಾರ್ಯಗಳಿಗೆ ₹1,24,593 ಕೋಟಿ.
karnataka budget 2024: ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ..?

karnataka budget 2024: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್..

  • ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಇ-ಆಫೀಸ್ ಪ್ರಾರಂಭ
  • ಗ್ರಾಮ ಪಂಚಾಯ್ತಿಗಳಲ್ಲಿ ಸ್ವತ್ತುಗಳ ಆಸೆಟ್ ಮಾನಿಟೈಸೇಷನ್ ನೀತಿ ಜಾರಿ
  • 50 ಗ್ರಾ.ಪಂ.ಗಳಲ್ಲಿ ಹೊಂಬೆಳಕು ಕಾರ್ಯಕ್ರಮದಡಿ ಸೋಲಾರ್ ದೀಪ ಅಳವಡಿಕೆ
  • ಸೋಲಾರ್ ದೀಪ ಅಳವಡಿಕೆಗೆ 25 ಕೋಟಿ ರೂ. ಮೀಸಲು
  • 200 ಗ್ರಾ.ಪಂಚಾಯ್ತಿಗಳಲ್ಲಿ ಬೀದಿ ದೀಪಗಳ ವ್ಯವಸ್ಥಿತ ಮೀಟರಿಂಗ್
  • ಆಯ್ದ 100 ಗ್ರಾ.ಪಂ.ಗಳಲ್ಲಿ ಹಿರಿಯ ನಾಗರಿಕರ ಆರೈಕೆ ಚಿಕಿತ್ಸಾ ಕೇಂದ್ರ
  • ರಸ್ತೆ ಸಂಪರ್ಕ ಜಾಲ ಅಭಿವೃದ್ಧಿಪಡಿಸಲು ಪ್ರಗತಿಪಥ ಯೋಜನೆ
  • 5,2000 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ
  • ಕಲ್ಯಾಣ ಪಥ ಯೋಜನೆಯಡಿ 1,150 ಕಿ.ಮೀ. ರಸ್ತೆ ಅಭಿವೃದ್ಧಿ
  • 38 ವಿಧಾನಸಭಾ ಕ್ಷೇತ್ರಗಳಲ್ಲಿ 1,000 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ
  • ನರೇಗಾ ಯೋಜನೆಯಡಿ 30 ಲಕ್ಷ ಕುಟುಂಬಗಳಿಗೆ ಉದ್ಯೋಗದ ಗುರಿ
  • ಪ್ರತಿ ತಾಲೂಕಿಗೆ ಎರಡು ಬೂದು ನೀರು ಸಂಸ್ಕರಣಾ ಘಟಕ ನಿರ್ಮಾಣ
  • ಅರಿವು ಕೇಂದ್ರ ಬಲಪಡಿಸಲು ₹132 ಕೋಟಿಯಲ್ಲಿ ಸ್ವಂತ ಕಟ್ಟಡ ನಿರ್ಮಾಣ

ಇದನ್ನು ಓದಿ: ಬಜೆಟ್ ನಲ್ಲಿ ಬೆಲೆ ಏರಿಕೆ ಶಾಕ್; ಮದ್ಯದ ಬೆಲೆ, ಮೋಟಾರು ವಾಹನಗಳ ತೆರಿಗೆ ಹೆಚ್ಚಳ

karnataka budget 2024: ಕೌಶಲ್ಯಾಭಿವೃದ್ಧಿ ಇಲಾಖೆಗೆ ಸಿದ್ದು ಕೊಟ್ಟಿದ್ದೇನು?

  • ಕೋಳಿ, ಕುರಿ, ಮೇಕೆ ಸಾಕಾಣೆ & ಮಾರುಕಟ್ಟೆಗೆ ₹100 ಕೋಟಿ
  • ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಆಹಾರ ನೀಡಲು ಕೆಫೆ ಸಂಜೀವಿನಿ
  • ಮಹಿಳೆಯರೇ ನಡೆಸುವ 50 ಕೆಫೆ ಸಂಜೀವಿನಿ ಹೋಟೆಲ್​ಗಳ ಸ್ಥಾಪನೆ
  • ಕೌಶಲ್ಯ ತರಬೇತಿ ಪಡೆದವರಿಗೆ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ
  • ಉದ್ಯಮಗಳ ಬೇಡಿಕೆಗೆ ಪೂರಕವಾದ Skill Connect Summit ಆಯೋಜನೆ
  • IIM-B ಸಹಯೋಗದೊಂದಿಗೆ 10 ಜಿಲ್ಲೆಗಳಲ್ಲಿ Incubation ಕೇಂದ್ರಗಳು
  • ವಿದ್ಯಾರ್ಥಿನಿ & ಉದ್ಯೋಗಸ್ಥ ಮಹಿಳೆಯರಿಗೆ 5 ನಗರಗಳಲ್ಲಿ ಹಾಸ್ಟೆಲ್

ಇದನ್ನು ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, ದೇವದಾಸಿಯರ ಮಾಸಾಶನ ಹೆಚ್ಚಳ, ಶೇ.6ರ ಬಡ್ಡಿ ಸಹಾಯಧನ

karnataka budget 2024: ನೀರಾವರಿ ಅಭಿವೃದ್ಧಿಗೆ ಕೊಡುಗೆ ಏನು?

  • ಕಳಸಾ- ಬಂಡೂರಿ ಯೋಜನೆ ಜಾರಿಗೆ ಸರ್ವ ಕ್ರಮ
  • ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ತೀರ್ಮಾನ
  • ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ
  • ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನ ಜಲಾಶಯ ನಿರ್ಮಾಣಕ್ಕೆ ಯೋಜನಾ ವರದಿ ಸಿದ್ದ
  • ರಾಜ್ಯದ ಏತ ನೀರಾವರಿ ಯೋಜನೆಗಳ ಅನುಷ್ಟಾನಕ್ಕೆ 7,280 ಕೋಟಿ
  • ಕೃಷ್ಣಾ ಮೇಲ್ದಂಡೆ ಯೋಜನೆ ಹಂತ – 3 ಯೋಜನೆ ಅಡಿ ಉಪ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ

ಇದನ್ನು ಓದಿ: ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್!

karnataka budget 2024: ಆರೋಗ್ಯ ಕ್ಷೇತ್ರಕ್ಕೆ ಭರಪೂರ ಅನುದಾನ

  • ಪ್ರತೀ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್, ಗ್ರಾಮೀಣ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು 6,493 ಆರೋಗ್ಯ ಕ್ಷೇಮ ಕೇಂದ್ರ & ಪ್ರತೀ ಜಿಲ್ಲೆಯಲ್ಲೂ ಒಂದೊಂದು ಡೇ ಕೇರ್ ಕೆಮೋಥೆರಪಿ ಕೇಂದ್ರ ಸ್ಥಾಪನೆ.
  • ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ₹150 ಕೋಟಿ ವೆಚ್ಚದಲ್ಲಿ ತಾಯಿ & ಮಕ್ಕಳ ಆಸ್ಪತ್ರೆ ನಿರ್ಮಾಣ,
  • ಟೆಲಿ-ಐಸಿಯು ವ್ಯವಸ್ಥೆ ಮುಖೇನ ಜಿಲ್ಲಾ ವೈದ್ಯರ ಸೇವೆ ತಾಲೂಕು ಆಸ್ಪತ್ರೆಗಳಿಗೂ ವಿಸ್ತರಣೆ.
  • ತಾಲ್ಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳು.
  • ಆರೋಗ್ಯ ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂಪಾಯಿಗಳ ಅನುದಾನ ಘೋಷಣೆ.
  • ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್‌ಗೆ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರ ಖರೀದಿ.

ಇದನ್ನು ಓದಿ: ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

karnataka budget 2024: ಪ್ರವಾಸೋದ್ಯಮ ಅಭಿವೃದ್ಧಿಗೆ ಬಜೆಟ್ ನಲ್ಲಿ ಭರ್ಜರಿ ಘೋಷಣೆ

  • ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
  • ಜಲಾಶಯಗಳ ಹಿನ್ನೀರಿನಲ್ಲಿ ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಗೆ ಪಣ.
  • 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್/ ರೋಪ್ ವೇ ಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತದೆ.
  • ಗೋಕಾಕ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ.
  • ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನು 3ಡಿ ಲೇಸರ್ ಸ್ಕ್ಯಾನಿಂಗ್ ಮೂಲಕ ದಾಖಲೀಕರಣ ಮಾಡಲಾಗಿದೆ.
  • ಕೆ.ಎಸ್.ಟಿ.ಡಿ.ಸಿ ವತಿಯಿಂದ ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್ ನಿರ್ಮಿಸಲಾಗುವುದು.
  • ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.
  • ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುತ್ತದೆ.
  • ರೇಣುಕಾ ಕ್ಷೇತ್ರ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯನ್ನು ರಚಿಸಿ ಅಧಿಸೂಚನೆ ಹೊರಡಿಸಲಾಗುತ್ತದೆ.
  • KSTDC ವತಿಯಿಂದ ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್ ನಿರ್ಮಾಣ.
  • ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್‌ಪ್ರಿಟೇಷನ್ ಸೆಂಟರ್‌.
  • ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ಮಂಡಳಿ ರಚನೆ.

ಇದನ್ನು ಓದಿ: ಒಂದಕ್ಕಿಂತ ಹೆಚ್ಚು EPF ಖಾತೆಗಳನ್ನು ಹೊಂದಿರುವಿರಾ? ವಿಲೀನಗೊಳಿಸುವ ಸರಳ ಪ್ರಕ್ರಿಯೆ ಇಲ್ಲಿದೆ!

karnataka budget 2024: ಉನ್ನತ ಶಿಕ್ಷಣಕ್ಕೆ ಸಿಎಂ ಸಿದ್ದು ಕೊಡುಗೆ..

  • ರಾಜ್ಯ ಶಿಕ್ಷಣ ನೀತಿ ಅನುಷ್ಠಾನ,
  • ₹30 ಕೋಟಿ ವೆಚ್ಚದಲ್ಲಿ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು & ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಉನ್ನತೀಕರಣ,
  • ಮೂಲಭೂತ ಸೌಕರ್ಯಕ್ಕೆ ಪದವಿ ಕಾಲೇಜುಗಳಿಗೆ ₹250 ಕೋಟಿ, ಪಾಲಿಟೆಕ್ನಿಕ್ ಕಾಲೇಜುಗಳಿಗೆ ₹120 ಕೋಟಿ,
  • ಉನ್ನತ ಶಿಕ್ಷಣ ಅಭಿವೃದ್ಧಿಪಡಿಸಲು ‘ಬೇರು-ಚಿಗುರು’ ಕಾರ್ಯಕ್ರಮ &
  • ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡವನ್ನು ₹54 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ.
  • ಶಿಕ್ಷಣ ಇಲಾಖೆಗೆ ಸಿಎಂ ಘೋಷಿಸಿದ್ದೇನು?
  • ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ
  • ಖಾಲಿ ಇರುವ ಶಿಕ್ಷಕರ, ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ
  • 20 ಸಾವಿರ ವಿಜ್ಞಾನ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗಾಗಿ 10 ಕೋಟಿ ಅನುದಾನ
  • ಸರ್ಕಾರಿ ಶಾಲೆಗಳು, ಕಾಲೇಜುಗಳಿಗೆ ಉಚಿತ ಕರೆಂಟ್
  • ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅಭಿವೃದ್ಧಿಗೆ 250 ಕೋಟಿ ಮೀಸಲು
  • ಮಹಿಳಾ ಪಾಲಿಟೆಕ್ನಿಕ್​​ ಉನ್ನತೀಕರಣಕ್ಕೆ 30 ಕೋಟಿ ರೂ. ಮೀಸಲು

karnataka budget 2024: ತೋಟಗಾರಿಕೆ ವಲಯದ ಏಳಿಗೆಗೆ ಒತ್ತು

  • ತೋಟಗಾರಿಕೆ ಕುರಿತು ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಕೃಷಿ ಯಂತ್ರೋಪಕರಣಗಳು ಹಾಗೂ ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸಲು ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ ಸ್ಥಾಪನೆ
  • ರಫ್ತು ಉತ್ತೇಜನಕ್ಕಾಗಿ ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸ್ಥಾಪನೆ
  • ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್‌ ಪಾರ್ಕ್‌ ಅಭಿವೃದ್ಧಿ

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ ಇಲ್ಲಿಕ್ಲಿಕ್ಮಾಡಿ
Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version