ಹುಬ್ಬಳ್ಳಿ : ಕಾಂಗ್ರೆಸ್ ಯಾವಾಗಲೂ ಹಿಂದೂ ವಿರೋಧಿ ಪಕ್ಷ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ತೆರಳಿ, ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯುವ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಪಾರ್ಟ್ ಟೈಂ ಹಿಂದೂಗಳು ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರಿಗೆ ಕೋರ್ಟ್ ಮೇಲೆ ನಂಬಿಕೆ ಇದೆಯೋ ಇಲ್ವೋ ಗೊತ್ತಿಲ್ಲ. ಇದುವರೆಗೂ ನಾನು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟಿಲ್ಲ ಎಂದರು.
ಕಾಂಗ್ರೆಸ್‌ನವರು ಹೆಚ್‌ಡಿ ಕುಮಾರಸ್ವಾಮಿ ಮೇಲೆ ಆರೋಪ ಮಾಡುತ್ತಿದ್ದಾರೆ. 2018ರಲ್ಲಿ ನೀವೇ ಹೆಚ್‌ಡಿ ಕುಮಾರಸ್ವಾಮಿ ಅವರ ಕಾಲು ಹಿಡಿದು ಮುಖ್ಯಮಂತ್ರಿಯನ್ನಾಗಿ ಮಾಡಿದ್ರಿ. ಇವಾಗ ನಿಮಗೆ ಜ್ಞಾನೋದಯ ಆಯ್ತಾ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ ಎಂದು ಭವಿಷ್ಯ ಹೇಳಲ್ಲ. ಆದರೆ ನೈತಿಕವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಹೇಳಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment