ಬೆಂಗಳುರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾ.ನಾಗಪ್ರಸನ್ನರವರ ಪೀಠದಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದ್ದು, ಅಕ್ಟೋಬರ್ 22 ಕ್ಕೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.. ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪ ಹಿನ್ನೆಲೆ ನಿರ್ಮಲಾ ಸೀತಾರಾಮನ್ ಸೇರಿ ಬಿಜೆಪಿ ನಾಯಕರ ವಿರುದ್ದ ಎಫ್ ಐ ಆರ್ ದಾಖಲಾಗಿತ್ತು…ಈ ಬೆನ್ನಲ್ಲೆ ಎಫ್‌ಐಆರ್ ರದ್ದು ಕೋರಿ ಬಿಜೆಪಿ ಲೀಗಲ್ ಟೀಂ ಅರ್ಜಿ ಸಲ್ಲಿಕೆ ಮಾಡಿತ್ತು.. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಪೀಠ ಮುಂದಿನ ವಿಚಾರಣೆ ತನಕ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ SIT ರಚನೆಗೆ ಮುಂದಾಗಿತ್ತು. ಇದರ ನಡುವೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಇದೀಗ ಬಿಜೆಪಿ ಟೀಂಗೆ ಸದ್ಯ ತಾತ್ಕಾಲಿಕ ರಿಲೀಫ್ ಸಿಕ್ಕಿದಂತಾಗಿದೆ. ದೂರುದಾರ ಆದರ್ಶ್ ಅಯ್ಯರ್ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಕಲಾತ್ತು ವಹಿಸಿದ್ದರು..ಇನ್ನು ನಳಿನ್ ಕುಮಾರ್ ಕಟೀಲ್ ಪರ ರಾಘವನ್ ವಾದ ಮಂಡಿಸಿದರು.
ನಿರ್ಮಲಾ ಸೀತಾರಾಮನ್, ಕಟೀಲ್, ವಿಜಯೇಂದ್ರಗೆ ತಾತ್ಕಾಲಿಕ ರಿಲೀಫ್ – ‘FIR’ ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ!
ಬೆಂಗಳುರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾ.ನಾಗಪ್ರಸನ್ನರವರ ಪೀಠದಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದ್ದು, ಅಕ್ಟೋಬರ್ 22 ಕ್ಕೆ ವಿಚಾರಣೆ ಮುಂದೂಡಿಕೆ…
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.