ಕನ್ನಡ ಕಿರುತೆರೆ ಖ್ಯಾತ ನಿರ್ದೇಶಕ ವಿನೋದ್ ದೊಂಡಲೆ ಸೂಸೈಡ್..!

ಬೆಂಗಳೂರು : ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟ, ನಿರ್ದೇಶಕ , ನಿರ್ಮಾಪಕರಾಗಿ ಸಕ್ರಿಯರಾಗಿದ್ದರು. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ…

ಬೆಂಗಳೂರು : ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಟ, ನಿರ್ದೇಶಕ , ನಿರ್ಮಾಪಕರಾಗಿ ಸಕ್ರಿಯರಾಗಿದ್ದರು. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ನಿರ್ಮಾಪಕರಾಗಿದ್ದರಿಂದ ಸಾಲದ ಸುಳಿಗೆ ಸಿಲುಕಿದ್ದ ವಿನೋದ್ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನಿನ್ನೆ ನಿನಾ ಸಂ ಸತೀಶ್ ಮತ್ತು ಚಿತ್ರತಂಡದ ಜೊತೆ ಮಾತನಾಡಿ ಬಂದಿದ್ದರು ಎಂದು ಹೇಳಲಾಗುತ್ತಿದೆ. ಅತಿಥಿ, ಬೇರು, ತುತ್ತೂರಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಕೆಲಸ ಮಾಡಿದ್ದಾರೆ.

ಇನ್ನೂ ಕರಿಮಣಿ , ಶಾಂತಂಪಾಪಂ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ಅವರು ನಿರ್ದೇಶನ ಮಾಡಿದ್ದಾರೆ. ನೀನಾಸಂ ಸತೀಶ್ ನಟನೆಯ ಅಶೋಕ್ ಬ್ಲೇಡ್ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದು ಮುಂದಿನ ವರ್ಷ ಸಿನಿಮಾ ಚಿತ್ರೀಕರಣ ಶುರು ಮಾಡಬೇಕಿತ್ತು. ಪಿ. ಶೇಷಾದ್ರಿ, ಟಿ ಎನ್, ಸೀತಾರಾಮ್ ಅವರ ಜೊತೆ ಸಿನಿಮಾ ಮತ್ತು ಧಾರವಾಹಿಗಳಲ್ಲಿ ಸಂಚಿಕೆ ನಿರ್ದೇಶಕರಾಗಿ ಕೂಡ ಕೆಲಸ ಮಾಡಿದ್ದರು. ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.