ಬೆಂಗಳೂರು: ಕರೋನ 2ನೇ ಅಲೆಯ ಹಿನ್ನಲೆ, ಇದರ ಕಡಿವಾಣಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದು, ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳನ್ನು ಬಂದ್ ಮಾಡಲಾಗಿದೆ.
ಇದರಿಂದ ಕ್ಷೌರಿಕರು, ಅಗಸರು, ಹಮಾಲರು, ಗೃಹಕಾರ್ಮಿಕರು, ಚಿಂದಿ ಆಯುವವರು, ಟೈಲರ್, ಮೆಕ್ಯಾನಿಕ್, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಸೇರಿದಂತೆ ಅನೇಕ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.
ಇನ್ನು, ಕೊರೋನಾ ಸೋಂಕಿನ ಎರಡನೇ ಅಲೆ ಹಿನ್ನೆಲೆ, 11 ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಒಂದು ಬಾರಿ ಪರಿಹಾರದ ಸಹಾಯಧನ ನೀಡಲು ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಲಾಗಿದೆ. ಕ್ಷೌರಿಕರು, ಅಗಸರು, ಹಮಾಲರು, ಗೃಹಕಾರ್ಮಿಕರು, ಚಿಂದಿ ಆಯುವವರು, ಟೈಲರ್, ಮೆಕ್ಯಾನಿಕ್, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು & ಭಟ್ಟಿ ಕಾರ್ಮಿಕರಿಗೆ ಸರ್ಕಾರ ₹2000 ಸಹಾಯಧನ ನೀಡುತ್ತಿದ್ದು, ಅರ್ಜಿ ಸಲ್ಲಿಸಲು ಸೇವಾಸಿಂದು ಪೋರ್ಟಲ್ sevasindhu.karnataka.gov.inಗೆ ಸಂಪರ್ಕಿಸಬಹುದು.