ಡೆಹ್ರಾಡೂನ್: ಕೊರೋನಾದಿಂದ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ಮಾಸಿಕ ₹3,000 ಸಹಾಯಧನ & ರಾಜ್ಯ ಸರ್ಕಾರದ ಉದ್ಯೋಗದಲ್ಲಿ 5% ಮೀಸಲಾತಿ ನೀಡಲಾಗುವುದು ಎಂದು ಉತ್ತರಾಖಂಡ ಸಿಎಂ ತಿರಥ್ ಸಿಂಗ್ ರಾವತ್ ಅವರು ಹೇಳಿದ್ದಾರೆ.
ಹೌದು,ಕೊರೋನಾದಿಂದ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ 21 ವರ್ಷ ತುಂಬುವವರೆಗೂ ಅವರ ಜೀವನ ನಿರ್ವಹಣೆ ಮತ್ತು ಶಿಕ್ಷಣಕ್ಕೆ ವ್ಯವಸ್ಥೆ ಮಾಡಲು ಉತ್ತರಾಖಂಡ ಬಿಜೆಪಿ ಸರ್ಕಾರ ನಿರ್ಧರಿಸಿದ್ದು, ಈ ಮಕ್ಕಳಿಗೆ ಮಾಸಿಕ ₹3,000 ಸಹಾಯಧನ & ರಾಜ್ಯ ಸರ್ಕಾರದ ಉದ್ಯೋಗದಲ್ಲಿ 5% ಮೀಸಲಾತಿ ನೀಡಲಾಗುವುದು ಎಂದು ಉತ್ತರಾಖಂಡ ಸಿಎಂ ತಿರಥ್ ಸಿಂಗ್ ರಾವತ್ ಹೇಳಿದ್ದಾರೆ.
ಇನ್ನು, ಪಂಜಾಬ್ ಸರ್ಕಾರ ಸಹ ಇಂತಹ ಮಕ್ಕಳಿಗೆ ಪದವಿವರೆಗೆ ಉಚಿತ ಶಿಕ್ಷಣ ನೀಡಲು ತೀರ್ಮಾನಿಸಿದ್ದು, ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಕಾದುನೋಡಬೇಕಿದೆ.