ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿತರಾಗಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಕರೋನ ಸಂಕಷ್ಟದ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಪ್ರವಾಸೋದ್ಯಮ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವ ಸಿ.ಪಿ. ಯೋಗೇಶ್ವರ್ ಅವರು, ಕೊರೋನಾ ಲಾಕ್ ಡೌನ್ ನಿಂದ ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಉಂಟಾಗಿರುವ ಪರಿಣಾಮಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಅಲ್ಲದೆ ಇದೇ ವೇಳೆ ಪ್ರವಾಸಿ ಗೈಡ್ ಗಳಿಗೆ 5,000 ರೂ. ಪರಿಹಾರ ನೀಡಲಾಗುವುದು ಎಂದು ಸಚಿವ ಯೋಗಿಶ್ವರ್ ಅವರು ಘೋಷಿಸಿದ್ದಾರೆ. ಇನ್ನು, ಹೋಟೆಲ್ ಕಾರ್ಮಿಕರಿಗೆ ತಲಾ 3 ಸಾವಿರ ರೂಪಾಯಿ ಪರಿಹಾರ ನೀಡಲು ಆರ್ಥಿಕ ಇಲಾಖೆಯಲ್ಲಿ ಚರ್ಚೆ ನಡೆದಿದ್ದು, ಶೀಘ್ರವೇ ಸರ್ಕಾರಿ ಆದೇಶ ಹೊರಬೀಳುವ ಸಾಧ್ಯತೆಯಿದೆ ಎಂದು ಸಚಿವರು ತಿಳಿಸಿದ್ದಾರೆ.