ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ ಅಭಿವೃದ್ಧಿಗಾಗಿ 10 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದೂ, ಇನ್ನು ನಾಲ್ಕೈದು ದಿನಗಳಲ್ಲಿ ಹರಿಹರ ಪಂಚಮಸಾಲಿ ಮಠದ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.
ಹರಿಹರದಲ್ಲಿ ಗುರುವಾರ ನಡೆದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವತಿಯಿಂದ ಹರಜಾತ್ರಾ ಮಹೋತ್ಸವದ ಸ್ವಾವಲಂಬಿ ಸಮಾವೇಶದಲ್ಲಿ ಸಂಕ್ರಾಂತಿ ಸಂಭ್ರಮವನ್ನು ಸಿಎಂ ಬಿ ಎಸ್ ಯಡಿಯೂರಪ್ಪ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಪೀಠದಲ್ಲಿ ವಿವಿಧ ಕೆಲಸ, ಕಾಮಗಾರಿಗಳನ್ನು ನಡೆಸಲು ಸ್ವಾಮೀಜಿ ಮತ್ತು ಸಮಿತಿ ಸದಸ್ಯರು ಅನುದಾನ ನೀಡುವಂತೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದ ಹಿನ್ನಲೆ ಈಗ ಹಣ ಮಂಜೂರಾಗಿದ್ದು, ಅದನ್ನು ಅಭಿವೃದ್ಧಿ ಕಾರ್ಯಕ್ಕೆ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.




