ನವದೆಹಲಿ: ಕೇಂದ್ರ ಸರ್ಕಾರ ಮುಂದಿನ 2 ವರ್ಷಗಳಲ್ಲಿ 1 ಕೋಟಿಗೂ ಹೆಚ್ಚು ಉಚಿತ ಎಲ್‌ಪಿಜಿ ಸಂಪರ್ಕ ನೀಡುವ ಗುರಿ ಹೊಂದಿದ್ದು, ದೇಶದ ಶೇ.100ರಷ್ಟು ಜನರಿಗೆ ಶುದ್ಧ ಇಂಧನ ತಲುಪಿಸಲು ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಎಲ್‌ಪಿಜಿ ಸಂಪರ್ಕ ಪಡೆಯಲು ದಾಖಲೆಗಳೊಂದಿಗೆ ಮತ್ತು ಸ್ಥಳೀಯ ಪ್ರಮಾಣಪತ್ರದ ದಾಖಲೆಗಳಿಲ್ಲದೆ ಸಂಪರ್ಕ ಒದಗಿಸುವ ಯೋಜನೆ ಸಿದ್ಧವಾಗಿದ್ದು, ಗ್ರಾಹಕರಿಗೆ ಶೀಘ್ರದಲ್ಲೇ ಅಕ್ಕಪಕ್ಕದ ಮೂರು ವಿತರಕರಿಂದ ರೀಫಿಲ್ ಸಿಲಿಂಡರ್ ಪಡೆಯಲು ಸಾಧ್ಯವಾಗಲಿದೆ ಎಂದು ಪೆಟ್ರೋಲಿಯಂ ಸಚಿವಾಲಯದ ಕಾರ್ಯದರ್ಶಿ ತರುಣ್ ಕಪೂರ್ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.