ಶಿಕ್ಷಣ ಇಲಾಖೆಯಿಂದ ಮಹತ್ವದ ನಿರ್ಧಾರ: ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳು 100 ರೂ..!

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಅಗತ್ಯವಿರುವ ಖರ್ಚುವೆಚ್ಚಗಳಿಗಾಗಿ ಮಕ್ಕಳ ಪೋಷಕರಿಂದ ದೇಣಿಗೆ ರೂಪದಲ್ಲಿ ಪ್ರತಿತಿಂಗಳು 100 ರೂ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಆದರೆ, ಈ ನಿಯಮ ಕಡ್ಡಾಯವಲ್ಲ. ಪೋಷಕರು…

schools vijayaprabha news

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಅಗತ್ಯವಿರುವ ಖರ್ಚುವೆಚ್ಚಗಳಿಗಾಗಿ ಮಕ್ಕಳ ಪೋಷಕರಿಂದ ದೇಣಿಗೆ ರೂಪದಲ್ಲಿ ಪ್ರತಿತಿಂಗಳು 100 ರೂ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಆದರೆ, ಈ ನಿಯಮ ಕಡ್ಡಾಯವಲ್ಲ. ಪೋಷಕರು ಸ್ವಇಚ್ಛೆಯಿಂದ ದಾನ, ದೇಣಿಗೆ ರೂಪದಲ್ಲಿ ಹಣವನ್ನು ನೀಡಬಹುದು ಎಂದೂ ಸ್ಪಷ್ಟಪಡಿಸಿದೆ.ಈ ಹಣವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಖಾತೆಗೆ ಸಂದಾಯ ಮಾಡಿಕೊಂಡು, ನಂತರ ಶಾಲಾ ಅಭಿವೃದ್ಧಿಗಾಗಿ ಬಳಸಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ವಿಶೇಷ ಸಂದರ್ಭಗಳಲ್ಲಿ ಒಂದಷ್ಟು ವಂತಿಗೆಯನ್ನು ಸರ್ಕಾರಿ ಶಾಲೆಗಳು ಪಡೆಯುತ್ತಿದ್ದವು. ಇನ್ನು ಮುಂದೆ ನಿತ್ಯದ ವೆಚ್ಚಗಳಿಗೂ ಮಕ್ಕಳ ಪೋಷಕರಿಂದ ಹಣ ಸಂಗ್ರಹಿಸಲಿದ್ದು, ಸಂಗ್ರಹಿಸಿದ ಹಣವನ್ನು ಎಸ್‌ಡಿಎಂಸಿ ಖಾತೆಗೆ ಜಮೆ ಮಾಡಬೇಕು ಎಂದು ತಿಳಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.