ರಾಜ್ಯ ಬಜೆಟ್‌ನ ಮೇಲಿನ ಭಾಷಣದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕೆಲವೊಂದು ಘೋಷಣೆಗಳನ್ನು ಮಾಡಿದ್ದರು. ಅದರಂತೆ ಬಜೆಟ್‌ನಲ್ಲಿ ಗೃಹಿಣಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ ₹500 ನೀಡಲಾಗುತ್ತದೆ ಎಂದು ಘೋಷಿಸಲಾಗಿತ್ತು.
ಆದರೆ, ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ₹500 ಬದಲಿಗೆ ₹1000 ಸಾವಿರ ನೀಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದರಿಂದ ಗೃಹಿಣಿಯರಿಗೆ ಇನ್ಮುಂದೆ 500ರೂಗಳ ಬದಲು 1000ರೂ ಸಿಗಲಿದೆ.
ಇದರ ಜೊತೆಗೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಘೋಷಿಸಲಾಗಿದ್ದ ಒಂದು ಸಾವಿರ ಬಸ್‌ಗಳನ್ನು ಘೋಷಿಸಲಾಗಿದ್ದು, ಬಸ್‌ಗಳ ಪ್ರಮಾಣವನ್ನು ಎರಡು ಸಾವಿರಕ್ಕೆ ಹೆಚ್ಚಿಸಲಾಗುತ್ತದೆ ಎಂದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.