ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಬಿಲ್ ಪಾವತಿಯಾಗದೆ ಸ್ಥಗಿತಗೊಂಡಿರುವ ಬಗ್ಗೆ ಪಾಲಿಕೆ ಸ್ಪಷ್ಟನೆ ಕೊಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ವಲಯಗಳಲ್ಲಿ 2017 ರಿಂದ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಿದ್ದು, ಯಶಸ್ವಿಯಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ. ಈ ಸಂಬಂಧ ದಕ್ಷಿಣ ವಲಯದ 11 ಇಂದಿರಾ ಕ್ಯಾಂಟೀನ್‌ಗಳನ್ನು ಸಂಬಂಧಪಟ್ಟ ಸಂಸ್ಥೆಯವರು ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿ ಊಟವನ್ನು ರಿಯಾಯಿತಿ ದರಗಳಲ್ಲಿ ಒದಗಿಸುತ್ತಿದೆ. ಗುತ್ತಿಗೆ ಪಡೆದಿರುವ ಸಂಸ್ಥೆಯು ಸಲ್ಲಿಸಿರುವ ಬಿಲ್‌ಗಳಲ್ಲಿ ಬಾಕಿ ಮೊತ್ತ ಅಂದಾಜು 40.00 ಕೋಟಿ ರೂ.ಗಳನ್ನು ಪಾವತಿಸದೇ ಇರುವ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ಅಡುಗೆ ಕೋಣೆಯಲ್ಲಿ ನೀರಿನ ಮತ್ತು ವಿದ್ಯುತ್ ಬಿಲ್‌ಗಳನ್ನು ಪಾವತಿಸದೇ ಇರುವುದರಿಂದ ದಿನಾಂಕ: 18-07-2024ರಂದು ಸ್ಥಗಿತಗೊಳಿಸಿರುತ್ತಾರೆ. ಪಾಲಿಕೆಯ ವ್ಯಾಪ್ತಿಯಲ್ಲಿ ಆಹಾರದ ಗುಣಮಟ್ಟ, ಪ್ರಮಾಣವನ್ನು ಪರಿಶೀಲಿಸಲು ಪ್ರತಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಾರ್ಷ್ಲ್‌ಗಳನ್ನು ನಿಯೋಜಿಸಲಾಗಿದೆ. ಮಾರ್ಷಲ್‌ಗಳು ಪ್ರತಿ ನಿತ್ಯ ಖರ್ಚಾಗುವ ಊಟದ ಪ್ರಮಾಣದ ವರದಿ ಅನ್ವಯ ನವೆಂಬರ್-2021 ರಿಂದ ತಹಲ್‌ವರೆಗೆ ಸಂಬಂಧಪಟ್ಟ ಸಂಸ್ಥೆಯವರಿಗೆ ಅನುದಾನವನ್ನು ಪಾವತಿ ಮಾಡಲಾಗಿರುತ್ತದೆ.ಆದರೆ, ದಕ್ಷಿಣ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯವರು ಇಂದಿರಾ ಕ್ಯಾಂಟೀನ್‌ಗಳಲ್ಲಿ ನಾಗರೀಕರಿಗೆ ಒದಗಿಸಿರುವ ಆಹಾರಕ್ಕಿಂತ ಹೆಚ್ಚಿನ ಮಟ್ಟದ ಬಿಲ್ ಸಲ್ಲಿಸಿರುವುದರಿಂದ ಅನುದಾನವನ್ನು ಕಡಿತಗೊಳಿಸಲಾಗಿರುತ್ತದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿದ್ದ 11 ಇಂದಿರಾ ಕ್ಯಾಂಟೀನ್‌ಗಳ ಕತೆ ಏನು?
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 11 ಇಂದಿರಾ ಕ್ಯಾಂಟೀನ್‌ಗಳು ಬಿಲ್ ಪಾವತಿಯಾಗದೆ ಸ್ಥಗಿತಗೊಂಡಿರುವ ಬಗ್ಗೆ ಪಾಲಿಕೆ ಸ್ಪಷ್ಟನೆ ಕೊಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ವಲಯಗಳಲ್ಲಿ 2017 ರಿಂದ…
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.