ಗುಡ್ ನ್ಯೂಸ್: ಇಂದು ಪಿಎಂ ಕಿಸಾನ್ ಯೋಜನೆಯ 12ನೇ ಕಂತು ಬಿಡುಗಡೆ; ರೈತರ ಖಾತೆಗೆ 2000..!

ಇಂದು (ಅಕ್ಟೋಬರ್ 17 ಸೋಮವಾರ) ಕಿಸಾನ್ ಸಮ್ಮಾನ್ ಯೋಜನೆಯಡಿ 12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಲಾಗುತ್ತಿದ್ದು, 16 ಸಾವಿರ ಕೋಟಿ ಹಣ 8 ಲಕ್ಷ ರೈತರ ಖಾತೆಗಳನ್ನು ಸೇರಲಿದೆ. ಇದೇ ವೇಳೆ ಪ್ರಧಾನಿ…

farmer vijayaprabha news1

ಇಂದು (ಅಕ್ಟೋಬರ್ 17 ಸೋಮವಾರ) ಕಿಸಾನ್ ಸಮ್ಮಾನ್ ಯೋಜನೆಯಡಿ 12ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಲಾಗುತ್ತಿದ್ದು, 16 ಸಾವಿರ ಕೋಟಿ ಹಣ 8 ಲಕ್ಷ ರೈತರ ಖಾತೆಗಳನ್ನು ಸೇರಲಿದೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ‘ಒಂದು ದೇಶ ಒಂದು ಗೊಬ್ಬರ’ ಹೆಸರಿನಲ್ಲಿ ಭಾರತ್ ಯೂರಿಯಾ, ಭಾರತ್ ಡಿಎಪಿ, ಭಾರತ್ ಎಂಓಪಿ, ಭಾರತ್ ಎನ್‍ಪಿಕೆ ರಸಗೊಬ್ಬರವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲದೇ, 600 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ.

ದೇಶದಲ್ಲಿರುವ 2.7 ಲಕ್ಷ ಗೊಬ್ಬರದ ಅಂಗಡಿಗಳನ್ನು ಹಂತ ಹಂತವಾಗಿ ವನ್ ಸ್ಟಾಪ್ ಸೆಂಟರ್‌ಗಳಾಗಿ ಬದಲಿಸಿ ಪಿಎಂ ಸಮೃದ್ಧಿ ಕೇಂದ್ರಗಳೆಂದು ಮರುನಾಮಕರಣ ಮಾಡಲಾಗುತ್ತದೆ. ವರ್ಚುವಲ್ ಆಗಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ ಮೂಲೆ ಮೂಲೆಗಳಿಂದ ಕೋಟ್ಯಾಂತರ ಜನರು ಪಾಲ್ಗೊಳ್ಳಲಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.