ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 13ನೇ ಕಂತಿನ ಹಣ ಇಂದು ಬಿಡುಗಡೆಯಾಗುತ್ತಿದ್ದು, ಜನವರಿ ಮೊದಲ ವಾರದಲ್ಲಿ ರೈತರ ಖಾತೆಗೆ 13ನೇ ಕಂತು ಜಮಾ ಆಗಲಿದೆ.
ಹೌದು, ಇತ್ತೀಚೆಗೆ ಪ್ರಧಾನಿ ಮೋದಿ ಅವರು ಕಿಸಾನ್ ಸಮ್ಮಾನ್ ಯೋಜನೆ 12ನೇ ಕಂತಿನ ಹಣವನ್ನು ಬಿಡುಗಡೆಗೊಳಿಸಿದ್ದರು. ಇದುವರೆಗೆ ಈ ಯೋಜನೆ ಭಾಗವಾಗಿ ಒಟ್ಟು 10 ಕೋಟಿಗೂ ಹೆಚ್ಚು ರೈತರು ಈ ಕಂತಿನ ಹಣದ ಫಲಾನುಭವ ಪಡೆದುಕೊಂಡಿದ್ದಾರೆ. ವಾರ್ಷಿಕವಾಗಿ 6 ಸಾವಿರ ರೂ.ಗಳನ್ನು ಪ್ರತಿ 4 ತಿಂಗಳಿಗೊಮ್ಮೆ 2000 ರೂ.ನಂತೆ ರೈತರ ಖಾತೆಗಳಿಗೆ ಕೇಂದ್ರ ಸರ್ಕಾರ ಜಮೆ ಮಾಡುತ್ತಿದೆ.
ಪಿಎಂ ಕಿಸಾನ್ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದ್ದರೆ, ನೀವು ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಸಹಾಯವಾಣಿ ಸಂಖ್ಯೆ- 155261 ಅಥವಾ 1800115526 (ಟೋಲ್ ಫ್ರೀ) ಅಥವಾ 011-23381092 ಅನ್ನು ಸಹ ಸಂಪರ್ಕಿಸಬಹುದು.