ಮದುವೆ ಮನೆಯಿಂದ ಮಸಣಕ್ಕೆ: ವಾಹನ ಕಂದಕಕ್ಕೆ ಬಿದ್ದು 14 ಮಂದಿ ದಾರುಣ ಸಾವು!

ಮದುವೆ ಮುಗಿಸಿಕೊಂಡು ವಾಪಸ್‌ ಬರುತ್ತಿದ್ದ ವಾಹನ ಕಂದಕಕ್ಕೆ ಬಿದ್ದು 14 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದ್ದು, ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ. ಹೌದು, ಜನರು ಪ್ರಯಾಣಿಸುತ್ತಿದ್ದ ವಾಹನವು ಸುಖಿಧಾಂಗ್ ರೀತಾ…

Road accident vijayaprabha

ಮದುವೆ ಮುಗಿಸಿಕೊಂಡು ವಾಪಸ್‌ ಬರುತ್ತಿದ್ದ ವಾಹನ ಕಂದಕಕ್ಕೆ ಬಿದ್ದು 14 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದ್ದು, ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ.

ಹೌದು, ಜನರು ಪ್ರಯಾಣಿಸುತ್ತಿದ್ದ ವಾಹನವು ಸುಖಿಧಾಂಗ್ ರೀತಾ ಸಾಹಿಬ್ ರಸ್ತೆಯ ಬಳಿಯ ಕಂದಕ್ಕೆ ಬಿದ್ದಿದ್ದು, 14 ಮಂದಿ ದಾರುಣ ಸಾವನ್ನಪ್ಪಿದ್ದಾರೆ ಎಂದು ಕುಮಾನ್ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಐಜಿ) ನೀಲೇಶ್ ಆನಂದ್ ಭರ್ನೆ ಅವರು ತಿಳಿಸಿದ್ದಾರೆ.

ಜನರು ಮದುವೆ ಸಮಾರಂಭ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದು, ಈ ವೇಳೆ ವಾಹನ ಕಂದಕಕ್ಕೆ ಬಿದ್ದಿದೆ. ಪರಿಣಾಮವಾಗಿ ವಾಹನದಲ್ಲಿದ್ದವರ ಪೈಕಿ 11 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗಳಾದವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಮತ್ತೆ ಮೂವರು ಮೃತಪಟ್ಟಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.