BIG BREAKING | ರಾಜ್ಯದಲ್ಲಿ 14 ಲಕ್ಷ BPL card ರದ್ದು!

BPL card : ರಾಜ್ಯದಲ್ಲಿ ಶೀಘ್ರವೇ 14 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ಉದ್ದೇಶಿಸಲಾಗಿದ್ದು, ಇದುವರೆಗೆ 3.63 ಲಕ್ಷ ಕಾರ್ಡ್ ರದ್ದಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಈ…

BPL card

BPL card : ರಾಜ್ಯದಲ್ಲಿ ಶೀಘ್ರವೇ 14 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ಉದ್ದೇಶಿಸಲಾಗಿದ್ದು, ಇದುವರೆಗೆ 3.63 ಲಕ್ಷ ಕಾರ್ಡ್ ರದ್ದಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಕೆ.ಹೆಚ್. ಮುನಿಯಪ್ಪ, ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಅನರ್ಹರ ಕಾರ್ಡ್‌ಗಳನ್ನು ರದ್ದು ಮಾಡಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅನರ್ಹರ BPL card ಮಾತ್ರ ರದ್ದು; ಅರ್ಹರಿಗೆ ರೇಷನ್ ಕಾರ್ಡ್ ರದ್ದು ಮಾಡೋಲ್ಲ: ಸಿಎಂ ಸಿದ್ದರಾಮಯ್ಯ

Vijayaprabha Mobile App free

ನಕಲಿ BPL card.. ಇಂದಿನಿಂದ ಪರಿಶೀಲನೆ

ರಾಜ್ಯದಲ್ಲಿ ನಕಲಿ ದಾಖಲೆ ನೀಡಿ ಪಡೆದಂತಹ ಬಿಪಿಎಲ್‌ ಕಾರ್ಡುದಾರರ ವಿರುದ್ಧ ಸರ್ಕಾರ ಸಮರ ಸಾರಲು ಮುಂದಾಗಿದ್ದು, ಸರ್ಕಾರ ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಮಾಡಲು ಮುಂದಾಗಿದೆ.

ಹೌದು, ಬೆಂಗಳೂರು ವ್ಯಾಪ್ತಿಯಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಆಗಲಿದೆ ಎಂದು ತಿಳಿದುಬಂದಿದೆ. IT ಹೆಸರಿನಲ್ಲಿ ರದ್ದಾಗಿರುವ ಬಿಪಿಎಲ್ ಕಾರ್ಡ್‌ಗಳನ್ನು ಇಂದಿನಿಂದ ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದ್ದು, IT, GST ಇರುವ 10,000 ಬಿಪಿಎಲ್ ಕಾರ್ಡ್‌ ರದ್ದು ಮಾಡಲು ಸರ್ಕಾರ ಮುಂದಾಗಿದೆ.

ಇದನ್ನೂ ಓದಿ: Ration Card EKYC | ರೇಷನ್ ಕಾರ್ಡ್‌ ರದ್ದಾಗುತ್ತೆ; ಡಿಸೆಂಬರ್ 1ರೊಳಗೆ ಇ-ಕೆವೈಸಿ ಮಾಡಿಸಿ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.