BIG BREAKING | ಕುಂಭಮೇಳದಲ್ಲಿ ಕಾಲ್ತುಳಿತ… 17 ಮಂದಿ ಸಾವು?

Kumbh Mela : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದೆ. ತ್ರಿವೇಣಿ ಸಂಗಮ ಘಾಟ್‌ನಲ್ಲಿ ನಡೆದ ಈ ಘಟನೆಯಲ್ಲಿ 17 ಭಕ್ತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಸೆಕ್ಟರ್‌-2 ಆಸ್ಪತ್ರೆಗೆ…

17 killed in stampede at Kumbh Mela

Kumbh Mela : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದೆ. ತ್ರಿವೇಣಿ ಸಂಗಮ ಘಾಟ್‌ನಲ್ಲಿ ನಡೆದ ಈ ಘಟನೆಯಲ್ಲಿ 17 ಭಕ್ತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಗಾಯಾಳುಗಳನ್ನು ಸೆಕ್ಟರ್‌-2 ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಅಪಾರ ಭಕ್ತರು ಸಂಗಮದಲ್ಲಿ ಅಮೃತ ಸ್ನಾನಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಈ ಬಗ್ಗೆ ಹೆಚ್ಚಿನ ವಿವರ ಇನ್ನಷ್ಟೇ ತಿಳಿಯಬೇಕಿದೆ

ಇದನ್ನೂ ಓದಿ: Union Budget 2025 : ಫೆಬ್ರವರಿ 1 ರಂದು ಕೇಂದ್ರ ಬಜೆಟ್‌ ಮಂಡನೆ ; ಈ 5 ಘೋಷಣೆಗಳ ಮೇಲೆ ಹೆಚ್ಚಿನ ನಿರೀಕ್ಷೆ

Vijayaprabha Mobile App free

ಕುಂಭಮೇಳದಲ್ಲಿ ಅಮೃತ ಸ್ನಾನ ತಾತ್ಕಾಲಿಕ ಸ್ಥಗಿತ

ಪ್ರಯಾಗ್‌ರಾಜ್‌ ಮಹಾ ಕುಂಭಮೇಳದ ತ್ರಿವೇಣಿ ಸಂಗಮ ಸ್ಥಳದಲ್ಲಿ ಕಾಲ್ತುಳಿತ ಸಂಭವಿಸಿದ ಹಿನ್ನೆಲೆಯಲ್ಲಿ ಇಂದಿನ ಅಮೃತ ಸ್ನಾನವನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ಅಖಾರ ಪರಿಷತ್ ಈ ನಿರ್ಧಾರ ಕೈಗೊಂಡಿದೆ.

ಆದರೆ ಸರ್ಕಾರ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ರಾತ್ರಿ 2 ಗಂಟೆಯ ಸುಮಾರಿಗೆ ಸಂಭವಿಸಿದ ನೂಕುನುಗ್ಗಲಿನಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಲವರು ಪ್ರಜ್ಞೆತಪ್ಪಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ. ಈ ದೃಶ್ಯಗಳು ವೈರಲ್‌ ಆಗುತ್ತಿವೆ.

ಇದನ್ನೂ ಓದಿ: Ration card | ಪಡಿತರದಾರರಿಗೆ ಗುಡ್ ನ್ಯೂಸ್; ತಿದ್ದುಪಡಿ ಮಾಡುವುದು ಈಗ ಬಲು ಸುಲಭ!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.