ರಾಜ್ಯದ ಅತಿಥಿ ಶಿಕ್ಷಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರಿಗೆ ಗೌರವಧನ ನೀಡಲು ಸರ್ಕಾರ 175.05 ಕೋಟಿ ರೂ ಬಿಡುಗಡೆ ಮಾಡಿದೆ.
ಹೌದು, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ 2022–23ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಗೌರವಧನ ನೀಡಲು ಸರ್ಕಾರ 175.05 ಕೋಟಿ ರೂ ಬಿಡುಗಡೆ ಮಾಡಿದ್ದು, ಈ ಅನುದಾನವನ್ನು ವಿಳಂಬ ಮಾಡದಂತೆ ತಾಲ್ಲೂಕು ಪಂಚಾಯಿತಿಗಳ ಮೂಲಕ ತಕ್ಷಣ ಬಳಕೆ ಮಾಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಆದೇಶ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.