Labour card : ಕರ್ನಾಟಕದಲ್ಲಿ ಅನರ್ಹ ರೇಷನ್ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದ್ದು, ಇದರ ಬೆನ್ನಲ್ಲೇ ಇದೀಗ ರಾಜ್ಯದ ಕಾರ್ಮಿಕರ ಕಾರ್ಡ್‌ಗಳನ್ನು(Labour card) ರದ್ದು ಮಾಡಲು ಸರ್ಕಾರ ಸಿದ್ದತೆ ನಡೆಸಿದೆ.
ಹೌದು, ಬಿಪಿಎಲ್, ಎಪಿಎಲ್ ಕಾರ್ಡ್ ಬೆನ್ನಲ್ಲೇ ಸರ್ಕಾರ ಈಗ ಕಾರ್ಮಿಕರ ಕಾರ್ಡ್ ಗಳನ್ನು ಅಮಾನತು ಮಾಡಲು ಮುಂದಾಗಿದ್ದು, ಸರ್ಕಾರ ಈಗ 2.46 ಲಕ್ಷ ಕಾರ್ಮಿಕರ ಕಾರ್ಡ್ ಗಳನ್ನು ಅಮಾನತು ಮಾಡಿದೆ.
ಇದನ್ನೂ ಓದಿ: Prediction 2025 | ಬೆಚ್ಚಿಬೀಳಿಸುತ್ತೆ ಬಾಬಾ ವಂಗಾ-ನಾಸ್ಟ್ರಾಡಾಮಸ್ ಭಯಾನಕ ಭವಿಷ್ಯ!
ಕಟ್ಟಡ ಮತ್ತುಇತರೇ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಬರೋಬ್ಬರಿ 38.42 ಲಕ್ಷ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 2,46,951 ಕಾರ್ಡನ್ನು ನಕಲಿ ಎಂದು ಲಿಸ್ಟ್ ಮಾಡಿದ ಕಾರ್ಮಿಕ ಇಲಾಖೆ ಅಮಾನತು ಮಾಡಲು ಆದೇಶಿಸಿದೆ. ನಕಲಿ ಕಾರ್ಡ್ ಗಳನ್ನು ಮಾಡಿಸಿ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ನಕಲಿ ಕಾರ್ಡ್ ಗಳ ಪತ್ತೆಗೆ ಮುಂದಾಗಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment