ನವದೆಹಲಿ: ವಾಟ್ಸಪ್ ತನ್ನ ಮೊದಲ ಮಾಸಿಕ ಅನುಸರಣೆ ವರದಿಯನ್ನು ಪ್ರಕಟಿಸಿದ್ದು, ಕಳೆದ ಮೇ 15ರಿಂದ ಜೂನ್ 15ರ ಮಧ್ಯೆ ದೇಶದಲ್ಲಿ 20 ಲಕ್ಷ ಖಾತೆಗಳ ಮೇಲೆ ನಿರ್ಬಂಧ ಹೇರಿರುವುದಾಗಿ ವಾಟ್ಸಾಪ್ ಸಂಸ್ಥೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ.
ಹೌದು, ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳ ಪ್ರಕಾರ 50 ಲಕ್ಷಕ್ಕೂ ಅಧಿಕ ಬಳಕೆದಾರರನ್ನು ಹೊಂದಿರುವ ಡಿಜಿಟಲ್ ವೇದಿಕೆಗಳು ಈ ವರದಿಯನ್ನು ಪ್ರಕಟಿಸುವುದು ಈಗ ಕಡ್ಡಾಯವಾಗಿದ್ದು, ಸ್ವಯಂಚಾಲಿತ ಅಥವಾ ಸ್ಪ್ಯಾಮ್ ಬಳಕೆ ಕಾರಣದಿಂದಾಗಿ ಶೇ.95ಕ್ಕಿಂತ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲಾಗಿದೆ ಎಂದು ವಾಟ್ಸಪ್ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.