ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಸಿಹಿಸುದ್ದಿ. ಈ ಯೋಜನೆಯ 12ನೇ ಕಂತಿನ 2 ಸಾವಿರ ರೂ ಮುಂದಿನ ಎರಡು ವಾರಗಳಲ್ಲಿ ರೈತರ ಖಾತೆಗೆ ಬರಲಿದೆ.
ಹೌದು, ಪಿಎಂ ಕಿಸಾನ್ ಯೋಜನೆಯಡಿ ವಾರ್ಷಿಕ 3 ಕಂತುಗಳಲ್ಲಿ ತಲಾ 2000 ರೂ ನಂತೆ ಒಟ್ಟು 6000 ರೂ ವರ್ಗಾಯಿಸಲಾಗುತ್ತದೆ. ಈ ಯೋಜನೆಗೆ ಇ-ಕೆವೈಸಿಯನ್ನು ಕಡ್ಡಾಯಗೊಳಿಸಲಾಗಿದೆ. ಪರಿಶೀಲನೆ ಪ್ರಕ್ರಿಯೆಯಲ್ಲಿ ಅನರ್ಹರ ಸಂಖ್ಯೆ ಹೆಚ್ಚಿದೆ. ಅಂತಹವರಿಗೆ ಎಲ್ಲ ಕಂತುಗಳ ಹಣ ವಾಪಸ್ ನೀಡುವಂತೆ ನೋಟಿಸ್ ಕಳುಹಿಸಲಾಗುತ್ತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.