ರಾಜ್ಯ ಸರ್ಕಾರದಿಂದ ಕರ್ನಾಟಕದ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ 24 ಸಾವಿರ ಕೋಟಿ ರೂ ಸಾಲ ನೀಡುವುದಾಗಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಘೋಷಿಸಿದ್ದಾರೆ.
ಹೌದು, ಈ ಕುರಿತು ತಿಪಟೂರಿನಲ್ಲಿ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್ ಅವರು, ಕರ್ನಾಟಕದ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ 24 ಸಾವಿರ ಕೋಟಿ ರೂ ಸಾಲ ನೀಡಲು ಸರ್ಕಾರ ಮುಂದಾಗಿದ್ದು, ಅಪೆಕ್ಸ್ ಬ್ಯಾಂಕ್ ಮತ್ತು DCC ಬ್ಯಾಂಕ್‌ಗಳ ಮೂಲಕ ಸಾಲ ವಿತರಿಸಲಾಗುತ್ತದೆ. ಈಗಾಗಲೇ ಅದಕ್ಕಾಗಿ ಏಳು ಸಾವಿರ ಕೋಟಿ ರೂ. ತೆಗೆದಿರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಇನ್ನು, ರಾಜ್ಯದಲ್ಲಿ 260ಕ್ಕೂ ಹೆಚ್ಚು ಕೋ ಆಪರೇಟೀವ್ ಬ್ಯಾಂಕ್‌ಗಳಿದ್ದು, ಒಳ್ಳೆಯ ಲಾಭದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದ್ದಾರೆ.