ಪ್ರಯಾಗ್‌ರಾಜ್ ಮಹಾ ಕುಂಭಮೇಳದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ವರ ಕುಟುಂಬದವರಿಗೆ UP ಸರ್ಕಾರ ತಲಾ 25 ಲಕ್ಷ ಪರಿಹಾರ ವಿತರಿಸಿದೆ.
ಮೃತಪಟ್ಟ ಕುಟುಂಬಸ್ಥರ ಬ್ಯಾಂಕ್ ಖಾತೆಗೆ RTGS ಮೂಲಕ ಪರಿಹಾರ ಮೊತ್ತ ಜಮೆ ಮಾಡಿದೆ.
ಜ್ಯೋತಿ ಹತ್ತರವಾಠ, ಮೇಘಾ ಹತ್ತರವಾಠ, ಅರುಣ ಕೋಪರ್ಡೆ & ಮಹಾದೇವಿ ಬಾವನೂರ ಮೃತಪಟ್ಟಿದ್ದರು.
ಘಟನೆ ನಡೆದ 40 ದಿನಗಳ ಬಳಿಕ ಪರಿಹಾರದ ಹಣ
ವಿತರಣೆ ಮಾಡಲಾಗಿದೆ. ಕರ್ನಾಟಕ ಸರ್ಕಾರದಿಂದಲೂ
ಪರಿಹಾರ ಸಿಗುವ ಸಾಧ್ಯತೆಯಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.