ರಾಜ್ಯದ ನಿರುದ್ಯೋಗಿ ಯುವಕರಿಗೆ ಬಂಪರ್ ಆಫರ್; 2,814 ಹುದ್ದೆಗಳ ಭರ್ತಿಗೆ ಸರ್ಕಾರ ಅಸ್ತು..!

ರಾಜ್ಯದ ನಿರುದ್ಯೋಗಿ ಯುವಕರಿಗೆ ಸಾರಿಗೆ ಇಲಾಖೆಯಿಂದ ಶುಭ ಸುದ್ದಿ ದೊರೆತಿದ್ದು, ರಾಜ್ಯ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 2,814 ಚಾಲಕರ ಹುದ್ದೆಗಳನ್ನು ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ…

B Sriramulu

ರಾಜ್ಯದ ನಿರುದ್ಯೋಗಿ ಯುವಕರಿಗೆ ಸಾರಿಗೆ ಇಲಾಖೆಯಿಂದ ಶುಭ ಸುದ್ದಿ ದೊರೆತಿದ್ದು, ರಾಜ್ಯ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 2,814 ಚಾಲಕರ ಹುದ್ದೆಗಳನ್ನು ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಕಲಾಪದಲ್ಲಿ ಮಾತನಾಡಿದ ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು, ಸಾರಿಗೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಎದುರಾಗಿರುವುದನ್ನು ಮನಗಂಡು, ಇಷ್ಟು ಹುದ್ದೆಗಳ ನೇಮಕಕ್ಕೆ 2019ರಲ್ಲೇ ಅಧಿಸೂಚನೆ ಹೊರಡಿಸಲಾಗಿತ್ತು. ಕೋವಿಡ್‌ ಕಾರಣದಿಂದ ಪ್ರಕ್ರಿಯೆ ನಡೆಯಲಿಲ್ಲ.

ಈಗ ನೇಮಕಾತಿ ಪ್ರಕ್ರಿಯೆ ಚುರುಕಾಗಿದೆ. ಶೀಘ್ರದಲ್ಲೇ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುವುದು. ಹೆಚ್ಚುವರಿಯಾಗಿ ಚಾಲಕ ಕಂ ನಿರ್ವಾಹಕರನ್ನು ಸಹ ನೇಮಕ ಮಾಡಿಕೊಳ್ಳಲಾಗುತ್ತದೆ. ಎಲ್ಲೆಲ್ಲಿ ಅಗತ್ಯವಿದೆಯೋ ಅಂತಹ ಕಡೆ ನಿಯೋಜನೆ ಮಾಡಿಕೊಳ್ಳಲಾಗುವುದು ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.