2A ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಕರಣ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ನೋಟಿಸ್ ಜಾರಿ

ಧಾರವಾಡ: ತಮಗೆ 2A ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸಮುದಾಯದ ಹೋರಾಟಗಾರರು, ಬೆಳಗಾವಿಯಲ್ಲಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುವ ಹೊತ್ತಲ್ಲೇ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದರು.…

ಧಾರವಾಡ: ತಮಗೆ 2A ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸಮುದಾಯದ ಹೋರಾಟಗಾರರು, ಬೆಳಗಾವಿಯಲ್ಲಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುವ ಹೊತ್ತಲ್ಲೇ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಇದೀಗ ಈ ಒಂದು ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧಾರವಾಡ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಸರ್ಕಾರಕ್ಕೆ ಹಾಗೂ ಗೃಹ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.

ಬೆಳಗಾವಿ ಸುವರ್ಣಸೌಧದ ಎದುರು ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರಿಂದ ಲಾಠಿ ಜಾರ್ಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠದಿಂದ ಸರ್ಕಾರ, ಗೃಹ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ನೋಟಿಸ್ ಜಾರಿ ಮಾಡಿದ್ದು, ಸ್ಪಷ್ಟನೆ ಕೆಳಲಾಗಿದೆ. ಲಾಠಿಚಾರ್ಜ್ ವಿರುದ್ಧ ಜಯಮೃತ್ಯುಂಜಯ ಶ್ರೀ, ಪಂಚಮಸಾಲಿ ವಕೀಲರ ಪರಿಷತ್ ಸೇರಿದಂತೆ ಧಾರವಾಡ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಇದೀಗ ನೋಟಿಸ್ ಜಾರಿ ಮಾಡಲಾಗಿದೆ.

ಈ ಕುರಿತು ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಲಾಠಿಚಾರ್ಜ್​ ಬಳಿಕ 12 ಜನರ ಮೇಲೆ ಎಫ್​​ಐಆರ್​ ದಾಖಲಿಸಿದ್ದಾರೆ. ಎಫ್​ಐಆರ್​ ರದ್ದುಪಡಿಸಬೇಕೆಂದು ನಾವು ಸರ್ಕಾರಕ್ಕೆ ಕೇಳಿದ್ದೆವು. ಲಾಠಿಚಾರ್ಜ್​​ ಸಂಬಂಧ ಸಿಎಂ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದೆವು. ಆದರೆ ಯಾವುದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿಲ್ಲ. ಹಾಗಾಗಿ ನಾವು ಕೋರ್ಟ್ ಮೊರೆ ಹೋದೆವು. ನಮ್ಮ ಪರವಾಗಿ ಪ್ರಭುಲಿಂಗ ನಾವದಗಿ, ಪೂಜಾ ವಾದ ಮಂಡಿಸಿದ್ದಾರೆ. ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶ ಆಗಿದೆ. ಹಲ್ಲೆ ಆಗಿದ್ದಕ್ಕೆ ಪಂಚಮಸಾಲಿ ಸಮಾಜದವರು ಧೃತಿಗೆಡುವುದು ಬೇಡ ಎಂದು ತಿಳಿಸಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.