BREAKING: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ: 1 ಗಂಟೆಗೆ ಸಿಎಂ ಮಹತ್ವದ ಘೋಷಣೆ..!

basavaraj-bommai-vijayaprabha basavaraj-bommai-vijayaprabha

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ವಿಚಾರವಾಗಿ ಮಧ್ಯಾಹ್ನ 1 ಗಂಟೆಗೆ ಮಹತ್ವದ ಘೋಷಣೆ ಮಾಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ ರಿಸರ್ವೇಶನ್‌ ಕುರಿತು ಸರ್ಕಾರ ಈಗಾಗಲೇ ಸಭೆ ನಡೆಸಿದ್ದು, ಸರಿಯಾದ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಸುವರ್ಣ ವಿಧಾನಸೌಧದ ಮುಂದೆ ಬೃಹತ್‌ ಸಮಾವೇಶ ನಡೆಸುತ್ತಿರುವ ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳಿಗೆ, ನಾಯಕರಿಗೆ ಸ್ವಲ್ಪ ತಾಳ್ಮೆಯಿಂದ ಇರುವಂತೆ ಮನವಿ ಮಾಡಿದ್ದಾರೆ.

ಇಂದು ರಾಜ್ಯ ಸರ್ಕಾರಕ್ಕೆ ಡೆಡ್‌ಲೈನ್..!

Advertisement

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ಮತ್ತೆ ಹೋರಾಟ ಆರಂಭಿಸಿದ್ದು, ಇಂದು ಮೀಸಲಾತಿ ಘೋಷಿಸಿದ್ದರೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಬಸವಜಯ ಮೃತ್ಯಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸುವರ್ಣಸೌಧಕ್ಕೆ ಪಂಚಮಸಾಲಿ ಮುತ್ತಿಗೆ ಹಿನ್ನೆಲೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸುವರ್ಣಸೌಧದ ಬಳಿ ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.ಇನ್ನು ರಾಷ್ಟ್ರೀಯ ಹೆದ್ದಾರಿ ಬಂದ್ ಆಗುವ ಸಾಧ್ಯತೆ ಇದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement