Heavy rain : ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ 3-4 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಣಾಮ ರಾಜ್ಯದ ಮೇಲಾಗುತ್ತಿದೆ. ಹೀಗಾಗಿ ಕರಾವಳಿ, ದ. ಒಳನಾಡಿನಲ್ಲಿ 3-4 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರದಲ್ಲಿ ಧಾರಾಕಾರ ಮಳೆ ಸುರಿಯಲಿದ್ದು, 10ಕ್ಕೂ ಹೆಚ್ಚಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ: ಸುದೀಪ್ ಬಿಗ್ ಬಾಸ್ ತೊರೆಯಲು ಕಾರಣವೇನು ಗೊತ್ತೇ..? ಅಸಲಿ ವಿಚಾರ ಇಂದು ಬಹಿರಂಗ..!
ಇನ್ನು, ದಕ್ಷಿಣ ಒಳನಾಡು ಪ್ರದೇಶದ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾ ಪುರ ಸೇರಿದಂತೆ ಮೋಡ ಕವಿದ ವಾತಾವರಣ ಇರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.