ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಾಗಿದ್ದು, ಹಲವು ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನು ಓದಿ: Jan Dhan Scheme: ಜನ್ ಧನ್ ಗ್ರಾಹಕರಿಗೆ 10 ಸಾವಿರ ರೂ,1.30 ಲಕ್ಷ ರೂ ಬೆನಿಫಿಟ್ಸ್!
ಹೌದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಹೀಗಾಗಿ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ರಾಯಬಾಗ್, ಬೈಲಹೊಂಗಲ, ಕಲಘಟಗಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.
ಇದನ್ನು ಓದಿ: SBI ನ ಹೊಸ ಯೋಜನೆ ಮತ್ತೆ ಬಂದಿದೆ; ಗ್ರಾಹಕರಿಗೆ ಹೆಚ್ಚು ಲಾಭ, ಕೊನೆಯ ದಿನಾಂಕ ಯಾವಾಗ? ಇಲ್ಲಿದೆ ನೋಡಿ
ಇನ್ನು, ಇಂದು ಅಲ್ಲಲ್ಲಿ ಮೋಡ ಕವಿದ ವಾತಾವರಣದ ಜೊತೆ ಮಳೆ ಬೀಳುವ ಸಂಭವವಿದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಬಳ್ಳಾರಿ ಹಾಗೂ ರಾಯಚೂರಿನಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಇದನ್ನು ಓದಿ: VIMUL ನಲ್ಲಿ ವಿವಿಧ ಹುದ್ದೆಗಳು; ಎಸ್‌ಎಸ್‌ಎಲ್‌ಸಿ, ಐಟಿಐ, ಪದವಿ ವಿದ್ಯಾರ್ಹತೆ, 25 ಏಪ್ರಿಲ್ ಕೊನೆ ದಿನ