ಬಿಸಿಲ ಧಗೆ ಕಡಿಮೆಯಾಗುವ ಎಲ್ಲಾ ಸಾಧ್ಯತೆಗಳನ್ನು ಹವಾಮಾನ ಇಲಾಖೆ ನೀಡುತ್ತಿದ್ದು, ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಹೌದು, ಮಾರ್ಚ್ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ, ಶಿವಮೊಗ್ಗ , ಕೊಡಗು, ಬೆಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎನ್ನಲಾಗಿದೆ.
ಇದನ್ನು ಓದಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ: ಹಲವಾರು ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 18 ಕೊನೆ ದಿನ
ಇಂದಿನಿಂದ ಮಾರ್ಚ್ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ, ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನು ಓದಿ: ಪ್ರಯಾಣಿಕರಿಗೆ ಬಿಗ್ ಶಾಕ್: KSRTC ಬಸ್ ದರ ದಿಢೀರ್ ಏರಿಕೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment