ತುಟ್ಟಿಭತ್ಯೆ ಹೆಚ್ಚಳ : ಕೇಂದ್ರ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ಶೇ 3ರಷ್ಟು ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರೊಂದಿದೆ ಉದ್ಯೋಗಿಗಳಿಗೆ ಡಿಎ ಶೇ50ರಿಂದ 53ಕ್ಕೆ ಏರಿಕೆಯಾಗಲಿದ್ದು ಈ ಹೆಚ್ಚಳವು ಜುಲೈ 1ರಿಂದ ಜಾರಿಗೆ ಬರಲಿದೆ.
“ಈ ಹೆಚ್ಚಳವು 7 ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಅಂಗೀಕೃತ ಸೂತ್ರಕ್ಕೆ ಅನುಗುಣವಾಗಿದೆ” ಎಂದು ಸರ್ಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಸರ್ಕಾರದ ಈ ಕ್ರಮವು ಲಕ್ಷಾಂತರ ಕೇಂದ್ರ ಸರ್ಕಾರಿ ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ ಲಾಭವಾಗಲಿದೆ.
ಇದು 47.68 ಲಕ್ಷ ಕೇಂದ್ರ ಸರ್ಕಾರಿ ನೌಕರರು, 68.62 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ. ಕಳೆದ ವರ್ಷವೂ ಕೇಂದ್ರ ಸರ್ಕಾರ ಹಬ್ಬದ ಸೀಸನ್‌ನಲ್ಲಿಯೇ ಶೇ.4ರಷ್ಟು ಡಿಎ ಹೆಚ್ಚಿಸಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment