ಮಹಿಳೆಯರಿಗೆ ಸಿಗುತ್ತೆ 3 ಲಕ್ಷ ಬಡ್ಡಿ ರಹಿತ ಸಾಲ; ಇಲ್ಲಿದೆ ಸಂಪೂರ್ಣ ಮಾಹಿತಿ…!

ದೇಶದ ಮಹಿಳೆಯರಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ ಜಾರಿಗೆ ತಂದಿರುವ ಯೋಜನೆ ಅದುವೇ ‘ಉದ್ಯೋಗಿನಿ ಸ್ಕೀಮ್ ‘. ಈ ಯೋಜನೆಯ ಲಕ್ಷಣಗಳೇನು, ಯೋಜನೆಯಡಿ…

scheme vijayaprabha news

ದೇಶದ ಮಹಿಳೆಯರಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ ಜಾರಿಗೆ ತಂದಿರುವ ಯೋಜನೆ ಅದುವೇ ‘ಉದ್ಯೋಗಿನಿ ಸ್ಕೀಮ್ ‘.

ಈ ಯೋಜನೆಯ ಲಕ್ಷಣಗಳೇನು, ಯೋಜನೆಯಡಿ ಸಾಲ ಪಡೆಯಲು ಅರ್ಹತೆ ಏನು, ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ.

ಉದ್ಯಮ ಆರಂಭಿಸಲು ಮಹಿಳೆಯರಿಗೆ ಸರ್ಕಾರದಿಂದ ಸಿಗುತ್ತೆ 3 ಲಕ್ಷ ಬಡ್ಡಿ ರಹಿತ ಸಾಲ. ಉದ್ಯಮ ಆರಂಭಿಸಿ ಯಶಸ್ಸು ಕಾಣಬೇಕೆಂದು ಹಂಬಲಿಸುವ ಬಡ ಮಹಿಳೆಯರಿಗಾಗಿ ಸರ್ಕಾರ ಆರಂಭಿಸಿರುವ ಯೋಜನೆಯೇ ‘ಉದ್ಯೋಗಿನಿ ಸ್ಟೀಮ್’. ಈ ಯೋಜನೆಯಡಿ ಮಹಿಳೆಯರು 3 ಲಕ್ಷ ರೂ.ವರೆಗೆ ಬಡ್ಡಿರಹಿತ ಸಾಲ ಪಡೆಯಬಹುದಾಗಿದೆ. ಸುಮಾರು 88 ವಿಧದ ಸಣ್ಣ ಉದ್ಯಮ ಆರಂಭಿಸಲು ಈ ಯೋಜನೆಯಡಿ ಬಡ್ಡಿರಹಿತ ಸಾಲ ದೊರೆಯುತ್ತದೆ.

Vijayaprabha Mobile App free

ಉದ್ಯೋಗಿನಿ ಯೋಜನೆ ಲಕ್ಷಣಗಳೇನು?

ಉದ್ಯೋಗಿನಿ ಯೋಜನೆಯಡಿ ಸಮಾಜದ ಎಲ್ಲ ವರ್ಗಗಳ ಮಹಿಳೆಯರಿಗೆ ಬಡ್ಡಿರಹಿತ ಸಾಲ ನೀಡಲಾಗುತ್ತದೆ. ವಿಧವೆಯರು, ಅಂಗವಿಕಲರು, ನಿರ್ಗತಿಕ ಮಹಿಳೆಯರಿಗೆ ವಿಶೇಷ ಪ್ರಾತಿನಿಧ್ಯ ನೀಡಲಾಗುತ್ತದೆ.

ಯಾವೆಲ್ಲ ಉದ್ಯಮ ಆರಂಭಿಸಲು ಸಿಗುತ್ತೆ ಸಾಲ?

ಸುಮಾರು 88 ವಿಧದ ಸಣ್ಣ ಉದ್ಯಮ ಆರಂಭಿಸಲು ಉದ್ಯೋಗಿನಿ ಯೋಜನೆಯಡಿ ಸಾಲ ಪಡೆಯಬಹುದಾಗಿದೆ. ಇವುಗಳಲ್ಲಿ ಹೊಲಿಗೆ, ದಿನಸಿ ಮಾರಾಟ, ಗ್ರಂಥಾಲಯ, ಬೇಕರಿ, ಅಗರಬತ್ತಿ ತಯಾರಿಕೆ, ಡೈರಿ ಹಾಗೂ ಕುಕ್ಕುಟೋದ್ಯಮ ಕೂಡ ಸೇರಿವೆ.

ಯಾವೆಲ್ಲ ಬ್ಯಾಂಕ್‌ಗಳು ಸಾಲ ನೀಡುತ್ತವೆ?

ದೇಶದ ಅನೇಕ ಖಾಸಗಿ ಮತ್ತು ಸರ್ಕಾರಿ ಸ್ವಾಮ್ಯದ ಅನೇಕ ಬ್ಯಾಂಕ್‌ಗಳು ಉದ್ಯೋಗಿನಿ ಯೋಜನೆಯಡಿ ಸಾಲ ನೀಡುತ್ತಿವೆ. ಪಂಜಾಬ್ ಆ್ಯಂಡ್ ಸಿಂಗ್‌ ಬ್ಯಾಂಕ್, ಸಾರಸ್ವತ ಬ್ಯಾಂಕ್‌ಗಳಲ್ಲಿಯೂ ಸಾಲ ಪಡೆಯಹುದಾಗಿದೆ. ಇವುಗಳು ಮಾತ್ರವಲ್ಲದೆ ಎಲ್ಲ ವಾಣಿಜ್ಯ ಬ್ಯಾಂಕ್‌ಗಳು, ಸಹಕಾರಿ ಬ್ಯಾಂಕ್‌ಗಳಿಂದಲೂ ಸಾ ಪಡೆಯಬಹುದಾಗಿದೆ.

ಸಾಲ ಪಡೆಯಲು ಅರ್ಹತೆಗಳೇನು?

ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಮಾತ್ರ ಸಾಲ ದೊರೆಯುತ್ತದೆ.18ರಿಂದ 55 ವರ್ಷಷ ವಯಸ್ಸಿನ ಮಹಿಳೆಯರು ಬಡ್ಡಿರಹಿತ ಸಾಲ ಪಡೆಯಲು ಅರ್ಹರಾಗಿದ್ದಾರೆ. ಸಾಲಕ್ಕೆ ಅರ್ಜಿ ಸಲ್ಲಿಸುವ ಮಹಿಳೆಯ ಕುಟುಂಬದ ಆದಾಯ 1.5 ಲಕ್ಷ ರೂ.ಗಿಂತ ಕಡಿಮೆ ಇರಬೇಕು.

ಸಾಲಕ್ಕೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆ ಬೇಕು?

1. ಆಧಾರ್ ಕಾರ್ಡ್

2. ಜನನ ಪ್ರಮಾಣಪತ್ರ

3. ಸ್ಥಳೀಯ ಶಾಸಕ ಅಥವಾ ಸಂಸದನ ಲೆಟರ್‌ಹೆಡ್ ಇರುವ ಪತ್ರ ಪ್ರತಿ

4. ಬಿಪಿಎಲ್ ಕಾರ್ಡ್‌ನ

5. ಜಾತಿ ಪ್ರಮಾಣಪತ್ರ

6. ಆದಾಯ ಪ್ರಮಾಣಪತ್ರ

ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

ಸಂಬಂಧಪಟ್ಟ ಬ್ಯಾಂಕ್‌ನ ವೆಬ್‌ಸೈಟ್‌ನಿಂದ ಉದ್ಯೋಗಿನಿ ಸಾಲದ ಅರ್ಜಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿ. ಅರ್ಜಿಯಲ್ಲಿ ಎಲ್ಲ ವಿವರಗಳನ್ನು ಭರ್ತಿ ಮಾಡಿ. ಬ್ಯಾಂಕ್ ಕೇಳಿರುವ ಎಲ್ಲ ದಾಖಲೆಗಳ ಪ್ರತಿಯನ್ನು ಅರ್ಜಿಯ ಜತೆಗೆ ಲಗತ್ತಿಸಿರಬೇಕು. ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿದ ಬಳಿಕ ಸಂಬಂಧಪಟ್ಟ ಬ್ಯಾಂಕ್ ಶಾಖೆಗೆ ತೆರಳಿ ಸಾಲ ಮಂಜೂರಾಗಿರುವ ಬಗ್ಗೆ ವಿಚಾರಿಸಿ. ಬ್ಯಾಂಕ್ ಶಾಖೆಗೆ ಭೇಟಿ ನೀಡಿಯೂ ಅರ್ಜಿ ಸಲ್ಲಿಸಬಹುದಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.