‘ದೀಪಿಕಾ ಸ್ಕಾಲರ್‌ ಶಿಪ್‌’ ಯೋಜನೆಯಡಿ 30,000 ವಿದ್ಯಾರ್ಥಿ ವೇತನ.. ಏನಿದು ಯೋಜನೆ? ಯಾರು ಅರ್ಹರು?

Deepika Scholarship : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರಿ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗಾಗಿ ‘ದೀಪಿಕಾ ವಿದ್ಯಾರ್ಥಿವೇತನ’ ಯೋಜನೆಗೆ ಚಾಲನೆ ನೀಡಿದ್ದಾರೆ. ಹೌದು, ಅಜೀಂ ಪ್ರೇಂಜಿ ಫೌಂಡೇಶನ್ ಸಹಯೋಗದಲ್ಲಿ ಪ್ರಾರಂಭಿಸಲಾದ ಈ ಕಾರ್ಯಕ್ರಮದಡಿ, 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000…

Deepika Scholarship scheme

Deepika Scholarship : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರಿ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗಾಗಿ ‘ದೀಪಿಕಾ ವಿದ್ಯಾರ್ಥಿವೇತನ’ ಯೋಜನೆಗೆ ಚಾಲನೆ ನೀಡಿದ್ದಾರೆ.

ಹೌದು, ಅಜೀಂ ಪ್ರೇಂಜಿ ಫೌಂಡೇಶನ್ ಸಹಯೋಗದಲ್ಲಿ ಪ್ರಾರಂಭಿಸಲಾದ ಈ ಕಾರ್ಯಕ್ರಮದಡಿ, 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000 ವಿದ್ಯಾರ್ಥಿವೇತನ ನೀಡಲಾಗುತ್ತದೆ. 10ನೇ ಮತ್ತು 12ನೇ ತರಗತಿಯನ್ನು ಸರ್ಕಾರಿ ಸಂಸ್ಥೆಗಳಲ್ಲಿ ಪೂರ್ಣಗೊಳಿಸಿರುವ ಹಾಗೂ ಪದವಿ ಹಂತದಲ್ಲಿರುವ ವಿದ್ಯಾರ್ಥಿನಿಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.

‘ದೀಪಿಕಾ ಸ್ಕಾಲರ್‌ ಶಿಪ್‌’.. ಏನಿದು ಯೋಜನೆ?

Deepika Scholarship scheme

Vijayaprabha Mobile App free

ದೀಪಿಕಾ ವಿದ್ಯಾರ್ಥಿ ವೇತನ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ ₹30,000 ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಮ್ ಜಿ ಫೌಂಡೇಶನ್‌ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ಸ್ಕಾಲರ್‌ ಶಿಪ್‌ ನೀಡಲಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಮಕ್ಕಳಾಗಿದ್ದು, ಇಂತಹ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂಬ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ.

‘ದೀಪಿಕಾ ಸ್ಕಾಲರ್‌ ಶಿಪ್‌’.. ಯಾರು ಅರ್ಹರು?

  • ವಿದ್ಯಾರ್ಥಿನಿಯರು 10ನೇ ತರಗತಿ, 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು.
  • ವಿದ್ಯಾರ್ಥಿನಿಯರು ಪ್ರತಿ ವರ್ಷ ತಪ್ಪದೇ ಉತೀರ್ಣರಾಗಬೇಕು.
  • State Syllabus, ICSE, CBSE, ISC ಈ ಯಾವುದೇ ಬೋರ್ಡ್‍ನಿಂದ 12ನೇ ತರಗತಿ ಅಥವಾ PUC ಪೂರ್ಣಗೊಳಿಸಿರಬಹುದು.
  • 2025-26ನೇ ಶೈಕ್ಷಣಿಕ ವರ್ಷದಲ್ಲಿ ನೀವು ಸಾಮಾನ್ಯ ಪದವಿ ಅಥವಾ ವೃತ್ತಿ ಶಿಕ್ಷಣ ಪದವಿ ಅಥವಾ ಇನ್ನಾವುದೇ ಪದವಿ ತರಗತಿಗೆ ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶಾತಿ ಪಡೆದಿರಬೇಕು.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.