ಭೂಪಾಲ್: ಸುಮಾರು 54 ಜನರು ಪ್ರಯಾಣಿಸುತ್ತಿದ್ದ ಬಸ್ ವೊಂದು ಕಾಲುವೆಗೆ ಉರುಳಿ ಬಿದ್ದ ಘಟನೆ ಮಧ್ಯಪ್ರದೇಶದ ಸೀಧಿ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಈವರೆಗೆ 32 ಜನರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಏಳು ಜನರ ರಕ್ಷಣೆ ಮಾಡಲಾಗಿದ್ದು, ಇನ್ನುಳಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.
ಈ ಬಸ್ ಸೀಧಿಯಿಂದ ಸತ್ನಾಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ರಾಷ್ಟೀಯ ವಿಪತ್ತು ಪ್ರತಿಕ್ರಿಯೆ ನಿಧಿ, ನುರಿತ ಈಜುಗಾರರು ಹಾಗು ಸ್ಥಳೀಯರ ಸಹಾಯದಿಂದ ಕಾಲುವೆಗೆ ಉರುಳಿ ಬಿದ್ದ ಪ್ರಯಾಣಿಕರ ರಕ್ಷಣೆಯಲ್ಲಿ ತೊಡಗಿದ್ದಾರೆ.
ಕೊಚ್ಚಿ ಹೋದ ಬಸ್: 32 ಜನರ ಸಾವು
ಈ ಘಟನೆಯಲ್ಲಿ 32 ಜನ ಮೃತಪಟ್ಟಿರುವುದಾಗಿ ತಿಳಿದುಬಂದಿದ್ದು, ಏಳು ಮಂದಿ ಈಜಿ ದಡ ಸೇರಿದ್ದಾರೆ. ಬಸ್‌ನಲ್ಲಿ ಕನಿಷ್ಠ 54 ಜನರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು, ಉಳಿದ ಪ್ರಯಾಣಿಕರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ಎಸ್ಪಿ ಪಂಕಜ್ ಕುಮಾವತ್ ಅವರು ಮಾಹಿತಿ ನೀಡಿದ್ದಾರೆ.