ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯು 4000 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 4000 ಸಿವಿಲ್ ಪೊಲೀಸ್ ಕಾನ್ಹೋಬಲ್ ಹುದ್ದೆಗಳನ್ನು ಭರ್ತಿಮಾಡಲು ಮೇ 2021ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು ಇದೀಗ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಲಿಖಿತ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 24 ಅಕ್ಟೋಬರ್ 2021 ರಂದು ನಡೆಸಲು ನಿಗದಿಪಡಿಸಿ ಪರೀಕ್ಷೆಯ ಪ್ರವೇಶಪತ್ರವನ್ನು ಪ್ರಕಟಿಸಲಾಗಿದೆ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://cpc21.ksp-online.in ಪ್ರವೇಶಿಸಿ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ಪರೀಕ್ಷೆಯ ಪ್ರವೇಶಪತ್ರ ಪಡೆದುಕೊಳ್ಳಬಹುದಾಗಿದೆ
ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ hhttp://cpc21.ksp-online.in ಬೇಟಿನೀಡಿರಿ.