ಡೆಲ್ಲಿ ತಂಡದ ಸಾಂಘಿಕ ಪ್ರದರ್ಶನ; ರಾಜಸ್ತಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 49 ರನ್ ಗೆಲುವು

ಶಾರ್ಜಾ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 23ನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು 46 ರನ್ ಗಳ ಭರ್ಜರಿ ಜಯಭೇರಿ ಬಾರಿಸಿ,…

ಶಾರ್ಜಾ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 23ನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು 46 ರನ್ ಗಳ ಭರ್ಜರಿ ಜಯಭೇರಿ ಬಾರಿಸಿ, ಪಾಯಿಂಟ್ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ.

185 ರನ್ ಗುರಿಯನ್ನು ಬೆನ್ನಟ್ಟಿದ ರಾಜಸ್ತಾನ್ ರಾಯಲ್ಸ್ 19.4 ಓವರ್ ಗಳಲ್ಲಿ ತನ್ನೆಲ್ಲಾ 10 ವಿಕೆಟ್ ಗಳನ್ನು ಕಳೆದುಕೊಂಡು 138 ರನ್ ಗಳಿಸಿ 49 ರನ್ ಗಳ ಹೀನಾಯ ಸೋಲನುಭವಿಸಿತು. ರಾಜಸ್ತಾನ್ ಪರ ಯಶಸ್ವಿ ಜೈಸ್ವಾಲ್-34, ಸ್ಟಿವ್ ಸ್ಮಿತ್-24, ರಾಹುಲ್ ತೇವತಟಿಯ -38, ರನ್ ಗಳಿಸಿದರು. ಡೆಲ್ಲಿ ಪರ, ಕಗಿಸೊ ರಬಾಡ 3 ವಿಕೆಟ್, ಅಶ್ವಿನ್, ಮಾರ್ಕಸ್ ಸ್ಟೋನಿಸ್ ತಲಾ 2 ವಿಕೆಟ್, ಎನ್ರಿಚ್ ನೊರ್ಟ್ಜೆ, ಅಕ್ಸಾರ್ ಪಟೇಲ್, ಹಾಗೂ ಹರ್ಷಲ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು.

ಇದಕ್ಕೂ ಮುಂಚೆ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರಂಭಿಕ ಆಟಗಾರನಾಗಿ ಪೃಥ್ವಿ ಷಾ-19, ಶ್ರೇಯಸ್ ಅಯ್ಯರ್-22, ಮಾರ್ಕಸ್ ಸ್ಟೋನಿಸ್-39, ಶಿಮ್ರನ್ ಹೆತ್ಮೆಯೆರ್ -45, ಹಾಗೂ ಅಕ್ಸಾರ್ ಪಟೇಲ್-17 ಅವರ ಆಟದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಎಲ್ಲಾ 8 ವಿಕೆಟ್ ಕಳೆದುಕೊಂಡು 184 ರನ್ ಗಳಿಸಿತು. ರಾಜಸ್ತಾನ್ ಪರ ಜೊಫ್ರಾ ಆರ್ಚರ್ 3 ವಿಕೆಟ್, ಕಾರ್ತಿಕ್ ತ್ಯಾಗಿ, ಆಂಡ್ರ್ಯು ಟೈ ಹಾಗೂ ರಾಹುಲ್ ತೇವಟಿಯ ತಲಾ 1 ವಿಕೆಟ್ ಪಡೆದರು.

Vijayaprabha Mobile App free

ಡೆಲ್ಲಿ ಕ್ಯಾಪಿಟಲ್ಸ್ ಪರ ಉತ್ತಮ ಪ್ರದರ್ಶನ ನೀಡಿದ ರವಿಚಂದ್ರನ್ ಅಶ್ವಿನ್ ಅವರಿಗೆ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.

ಇದನ್ನು ಓದಿ: ಐಪಿಎಲ್ ಇತಿಹಾಸದಲ್ಲಿ ಅಪರೂಪದ ಸಾಧನೆ ಮಾಡಿದ ಡ್ವೇನ್ ಬ್ರಾವೋ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.