ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆಯಾಗಲಿದ್ದು, 7 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಜಾರಿ ಮಾಡಲಿದ್ದು, ಇದೇ 20ರಿಂದ 22ರವೆರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು, ದಕ್ಷಿಣ ಒಳನಾಡು & ಉತ್ತರ ಒಳನಾಡಿನಲ್ಲಿ ಮಳೆಯಾಗಲಿದ್ದು, ದಾವಣಗೆರೆ ಜಿಲ್ಲೆ ಸೇರಿದಂತೆ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ಮೈಸೂರು ಜಿಲ್ಲೆಗಳಲ್ಲಿ ಜುಲೈ 19ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹವಾಮಾನ ಇಲಾಖೆಗೆ ತಿಳಿಸಿದೆ.