Heavy rain : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 1 ವಾರ ವ್ಯಾಪಕ ಮಳೆಯಾಗಲಿದೆ (Heavy rain)ಎಂದು ಹವಾಮಾನ ಇಲಾಖೆ (Meteorological Department) ಎಚ್ಚರಿಕೆ ನೀಡಿದೆ.
ಹೌದು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ, ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ, ಕೊಪ್ಪಳ, ವಿಜಯಪುರ ಜಿಲ್ಲೆಗೆ ಮತ್ತು ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೊ ಅಲರ್ಟ್ ನೀಡಲಾಗಿದೆ.
ಇನ್ನು, ಅಕ್ಟೊಬರ್ 03 ರಿಂದ 07ರವರೆಗೆ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ನವರಾತ್ರಿಯಲ್ಲಿ ಪೂಜಿಸಲ್ಪಡುವ ದುರ್ಗಾದೇವಿಯ ಒಂಭತ್ತು ಅವತಾರಗಳು, ಇಷ್ಟದ ಬಣ್ಣಗಳು
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment