heavy rain: ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಸೆಪ್ಟೆಂಬರ್ 12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಹೌದು, ಮುಂದಿನ 48 ಗಂಟೆಗಳಲ್ಲಿ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದು, ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಬೀದರ್, ಕಲಬುರ್ಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೆ.12ರವರೆಗೆ ಮಳೆಯ ಆರ್ಭಟ; ಹವಾಮಾನ ಇಲಾಖೆಯಿಂದ ಎಚ್ಚರಿಕೆ!
heavy rain: ರಾಜ್ಯದ ಇಂದಿನ ಹವಾಮಾನ ವರದಿ
ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮುಂಗಾರು ಚುರುಕುಗೊಂಡಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗಲಿದ್ದು, ಈ ಭಾಗಗಳಿಗೆ ಸೆ.8 ಹಾಗೂ 9 ರಂದು ಯೆಲ್ಲೋ ಅಲರ್ಟ್ ಸಹ ಘೋಷಿಸಲಾಗಿದೆ.
ಬಿರುಗಾಳಿ ವೇಗವಾಗಿ ಬೀಸುವ ಮುನ್ಸೂಚನೆ ಇದ್ದು, ಮೀನುಗಾರರು ಇಂದಿನಿಂದ ಮುಂದಿನ ಸೂಚನೆಯವರೆಗೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಉತ್ತರ ಒಳನಾಡಿನ ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಹಾಗೂ ಕೊಡಗು ಜಿಲ್ಲೆಗೆ ಸೆ.8 ಹಾಗೂ 9 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸಾಮಾನ್ಯರಿಗೆ ಬಿಗ್ ಶಾಕ್; ಸಕ್ಕರೆ ಬೆಲೆಯಲ್ಲಿ ಭಾರಿ ಏರಿಕೆ
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ಮಾಡಿ |