ಬೆಂಗಳೂರು : ಪೌರಕಾರ್ಮಿಕರ ದಿನಾಚರಣೆ ಹಿನ್ನೆಲೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ. ಕರ್ತವ್ಯ ನಿರತ ಪೌರಕಾರ್ಮಿಕರು ಕೊರೋನಾದಿಂದಾಗಿ ಮೃತಪಟ್ಟರೆ ಅವರ ಕುಟುಂಬಕ್ಕೆ ಸರ್ಕಾರ ₹50 ಲಕ್ಷ ಪರಿಹಾರ ನೀಡಬೇಕು ಎಂದು ಹೇಳಿದ್ದಾರೆ.
ಹಣರೂಪದ ಪರಿಹಾರ ಸರ್ಕಾರದ ಆಡಳಿತಾತ್ಮಕ ಕರ್ತವ್ಯವಾಗುತ್ತದೆ. ಪೌರಕಾರ್ಮಿಕರನ್ನು ಸದಾ ಕೃತಜ್ಞತೆಯಿಂದ ಸ್ಮರಿಸುವುದು, ಅವರ ಬೇಡಿಕೆಗಳನ್ನು ಈಡೇರಿಸುವುದೇ ಅವರಿಗೆ ಸಲ್ಲಿಸಬಹುದಾದ ನಿಜ ಗೌರವ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ತ್ಯಾಗ, ಸೇವೆ, ಸಮರ್ಪಣೆ, ಕಾರುಣ್ಯದಿಂದ ಸದಾ ಜೀವ ತೇಯುತ್ತಿರುವ ಪೌರಕಾರ್ಮಿಕರನ್ನು ಈ ಸಮಾಜ ಪ್ರತಿಕ್ಷಣವು ತಾಯ್ತನದಿಂದ ಕಾಣುವುದೇ ನಾವು ಅವರಿಗೆ ಸಲ್ಲಿಸಬಹುದಾದ ದೊಡ್ಡ ಕೃತಜ್ಞತೆ.
ಪೌರಕಾರ್ಮಿಕ ದಿನಾಚರಣೆಯ ಶುಭಾಶಯಗಳು.🌹
1/3
— H D Kumaraswamy (@hd_kumaraswamy) September 23, 2020
ಕರ್ತವ್ಯ ನಿರತ ಪೌರಕಾರ್ಮಿಕರು ಸೋಂಕಿನಿಂದ ಸಾವಿಗೆ ತುತ್ತಾದರೆ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರವನ್ನು ಸರ್ಕಾರ ನೀಡಬೇಕು.ಹಣರೂಪದ ಪರಿಹಾರ ಸರ್ಕಾರದ ಆಡಳಿತಾತ್ಮಕ ಕರ್ತವ್ಯವಾಗುತ್ತದೆ.ಪೌರಕಾರ್ಮಿಕ ಸಮುದಾಯವನ್ನು ಸದಾ ಕೃತಜ್ಞತೆಯಿಂದ ಸ್ಮರಿಸುವುದು,ಅವರ ಬೇಡಿಕೆಗಳನ್ನು ಈಡೇರಿಸುವುದೇ ಅವರಿಗೆ ಸಲ್ಲಿಸಬಹುದಾದ ನಿಜ ಗೌರವವಾಗುತ್ತದೆ.
3/3— H D Kumaraswamy (@hd_kumaraswamy) September 23, 2020