ಬೆಂಗಳೂರು: ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಬೊಮ್ಮಾಯಿ, ಮಹಿಳೆಯರಿಗಾಗಿ ಗೃಹಿಣಿ ಶಕ್ತಿ ಯೋಜನೆ ಜಾರಿಗೊಳಿಸುತ್ತೇವೆ. ಈ ಯೋಜನೆ ಮೂಲಕ ಗೃಹಿಣಿಯರಿಗೆ ಮಾಸಿಕ 500 ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಘೋಷಿಸಿದರು.
ಮಹಿಳೆಯರಿಗೆ ವಿಶೇಷ ಯೋಜನೆಗಳು..
ಮಹಿಳಾ ಸಂಘಟಿತ ಕಾರ್ಮಿಕರಿಗೂ ಉಚಿತ ಬಸ್ ಪಾಸ್
5,000 ಮಹಿಳಾ ಸ್ವಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲಕ್ಕೆ 1800 ಕೋಟಿ ರೂ.
ಸ್ವಸಹಾಯ ಗುಂಪುಗಳಿಗೆ ಉತ್ಪನ್ನ ತಯಾರಿಸಲು ಸ್ತ್ರೀ ಸಾಮರ್ಥ್ಯ ಯೋಜನೆಯಡಿ 50 ಸಾವಿರ ಸ್ವಸಹಾಯ ಗುಂಪುಗಳಿಗೆ 500 ಕೋಟಿ ಸಮುದಾಯ ಬಂಡವಾಳ ನಿಧಿ ಸ್ಥಾಪನೆ
ಮಹಿಳೆಯರಿಗೆ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ
ಶೂನ್ಯ ಬಡ್ಡಿದರದಲ್ಲಿ ಸ್ವಸಹಾಯ ಗುಂಪುಗಳಿಗೆ ಸಾಲ
ಆಸಿಡ್ ದಾಳಿಗೆ ಒಳಗಾದವರಿಗೆ ಬಡ್ಡಿ ರಹಿತ ಸಾಲ ಘೋಷಣೆ
ರಾಜೀವ್ ಗಾಂಧಿ ವಸತಿ ನಿಗಮ ದಿಂದ ವಸತಿ ಸೌಲಭ್ಯ, ಸ್ವಯಂ ಉದ್ಯೋಗಕ್ಕಾಗಿ ಮಹಿಳಾ ಅಭಿವೃದ್ಧಿ ನಿಗಮದಿಂದ ಬಡ್ಡಿ ರಹಿತ ಸಾಲ
ಉತ್ಕೃಷ್ಟ ಚಿಕಿತ್ಸೆ ಮತ್ತು ಕಾನೂನು ನೆರವು ನೀಡಲು ಮಹಿಳಾ ಅಭಿವೃದ್ಧಿ ನಿಗಮದಲ್ಲಿ ವಿಶೇಷ ನಿಧಿ ಸ್ಥಾಪನೆ.




