ವಾರಂಗಲ್: ವಾರಂಗಲ್ ಕೋಟೆ ಬಳಿಯ ಮಟ್ಟಿಕೋಟದ ಕುರಿ ತೋಟದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 500 ಕುರಿಗಳು ಸಾವನ್ನಪ್ಪಿವೆ.
ತೋಟದ ಮಾಲೀಕ ಲಕ್ಷ್ಮಣ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸ್ಥಳೀಯರು ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಈ ಘಟನೆಯು ಆಕಸ್ಮಿಕವಾಗಿದೆಯೇ ಅಥವಾ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆಯೇ ಎಂದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕುರಿಗಳ ಸಾವಿನಿಂದ ಸುಮಾರು 30 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.