ನವದೆಹಲಿ: ದೇಶದಲ್ಲಿ ಕೊರೋನಾ 2ನೇ ಅಲೆಯ ಆರ್ಭಟದ ನಡುವೆ ಮತ್ತೊಂದು ಮಹಾಮಾರಿ ವೈರಸ್ ಬ್ಲ್ಯಾಕ್ ಫಂಗಸ್ (ಕಪ್ಪು ಶಿಲೀಂಧ್ರ) ತೀವ್ರ ಆತಂಕಕ್ಕೆ ಸೃಷ್ಟಿಸಿದ್ದು, ದೇಶದಲ್ಲಿ ಬುಧವಾರದವರೆಗೆ 5500 ಪ್ರಕರಣಗಳು ವರದಿಯಾಗಿವೆ ಎನ್ನಲಾಗಿದೆ.
ಈ ಪೈಕಿ 126 ಮಂದಿ ಬ್ಲ್ಯಾಕ್ ಫಂಗಸ್ ನಿಂದ ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಆತಂಕಕಾರಿ ಸಂಗತಿ ವರದಿಯಾಗಿದ್ದು, ಮಹಾರಾಷ್ಟ್ರದಲ್ಲಿ 90 ಸಾವುಗಳು ವರದಿಯಾಗಿವೆ ಎಂಬುದು ಮತ್ತೊಂದು ಸಂಗತಿ.
ಇನ್ನು ಕರ್ನಾಟಕದಲ್ಲಿ 40 ಬ್ಲ್ಯಾಕ್ ಫಂಗಸ್ ಪ್ರಕರಣಗಳು ದಾಖಲಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.