ಕುಕ್ಕೆಯಲ್ಲಿ ಮದುವೆಯಾಗುವ ಬರೋಬ್ಬರಿ ವಧುವರರಿಗೆ 55 ಸಾವಿರ ಪ್ರೋತ್ಸಾಹ ಧನ

ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 25ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದ್ದು, ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರ್ಮ್ ಪಡೆದು ಭರ್ತಿ…

ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 25ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದ್ದು, ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರ್ಮ್ ಪಡೆದು ಭರ್ತಿ ಮಾಡಿ ದೇವಳಕ್ಕೆ ಸಲ್ಲಿಸಬಹುದು.

ಇನ್ನು, ವಿವಾಹವಾಗಲು ಬಯಸುವವರು ಅರ್ಜಿ ಸಲ್ಲಿಸಲು ಆಗಸ್ಟ್ 4 ಕೊನೆಯ ದಿನಾಂಕವಾಗಿದ್ದು, ವರನಿಗೆ ಶ್ರೀ ದೇವಳದಿಂದ ಪ್ರೋತ್ಸಾಹ ಧನ 5 ಸಾವಿರ, ವಧುವಿಗೆ 10 ಸಾವಿರ ರೂ, 40 ಸಾವಿರ ಮೌಲ್ಯದ ಚಿನ್ನದ ತಾಳಿ, 2 ಚಿನ್ನದ ಗುಂಡು ಸೇರಿದಂತೆ ಒಟ್ಟು 55 ಸಾವಿರ ರೂ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ 08257-281224, 236200, 281700, 281423 ಸಂಪರ್ಕಿಸಲು ತಿಳಿಸಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.