ದೇಶದ ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಅನೇಕ ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ.
ದೇಶದಲ್ಲಿ ಇನ್ನೂ ಅನೇಕ ರೈತರು ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ಸಹಾಯದ ಪ್ರಯೋಜನವನ್ನು ಪಡೆಯುತ್ತಿಲ್ಲ. ಅಂತಹ ರೈತರು 6,000 ರೂಪಾಯಿಗಳ ಆರ್ಥಿಕ ಲಾಭ ಪಡೆಯಲು ವೆಬ್‌ಸೈಟ್ https://pmkisan.gov.in/ ಗೆ ಭೇಟಿ ನೀಡಿ, ನೋಂದಣಿ ಮಾಡಿಕೊಳ್ಳಬಹುದು.
ಇನ್ನು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ 2000 ರೂಗಳಂತೆ ವರ್ಷಕ್ಕೆ ಮೂರೂ ಕಂತುಗಳಲ್ಲಿ 6,000 ರೂಪಾಯಿಗಳ ಆರ್ಥಿಕ ಸಹಾಯದನವನ್ನು ಅವರ ಖಾತೆಗೆ ಜಮಾ ಮಾಡಲಾಗುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.